ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದ ಮುಂಭಾಗದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಅಂಬೇಡ್ಕರ್ ಅವರ ಬಗ್ಗೆ ಅಪಾರ ಶ್ರದ್ಧೆ ಮತ್ತು ಗೌರವ ಹೊಂದಿರುವ ಸಿದ್ದರಾಮಯ್ಯ ವಿಗ್ರಹಕ್ಕೆ ಮಾಲಾರ್ಪಣೆ ಮಾಡಿದರು.
ಮಾಲಾರ್ಪಣೆ ಮಾಡಿದ ಬಳಿಕ ಅವರು ಪುಷ್ಪಾರ್ಚನೆ ಕೂಡ ಮಾಡುತ್ತಾರೆ. ಮುಖ್ಯಮಂತ್ರಿಯೊಂದಿಗಿರುವ ಸಮಾಜ ಕಲ್ಯಾಣ ಸೇವೆ ಸಚಿವ ಡಾ ಹೆಚ್ ಸಿ ಮಹದೆವಪ್ಪ ಮತ್ತು ಮಾಜಿ ಸಚಿವ ಹೆಚ್ ಆಂಜನೇಯ ಡಾ ಬಿ ಆರ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.