ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಗೆ

ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಗೆ

ಬೆಂಗಳೂರು, ಡಿ. 6: 15 ಕ್ಷೇತ್ರದ ಉಪ ಚುನಾವಣೆ ಮತದಾನ ಮುಕ್ತಾಯಗೊಂಡಿದೆ. ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಭವಿಷ್ಯ ಮತಯಂತ್ರ ಸೇರಿದೆ. ಚುನಾವಣಾ ಫಲಿತಾಂಶಕ್ಕೂ ಮೊದಲು ಅವರು ಕಾಂಗ್ರೆಸ್ಗೆ ವಾಪಸ್ ಆಗುವ ಸೂಚನೆ ಸಿಕ್ಕಿದೆ?.

ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಮಾಡಿರುವ ಟ್ವೀಟ್ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಮಾಜಿ ಸಚಿವ, ಒಂದು ಕಾಲದಲ್ಲಿ ಸಿದ್ದರಾಮಯ್ಯ ಆಪ್ತರಾದ ರಮೇಶ್ ಜಾರಕಿಹೊಳಿ ಕಾಂಗ್ರೆಸ್ಗೆ ಮರಳಲಿದ್ದಾರೆಯೇ ಎಂಬ ಚರ್ಚೆ ಆರಂಭವಾಗಿದೆ.

“ಬಿಜೆಪಿ ಎನ್ನುವುದು ತಲೆಕೆಡಿಸುವ ಕಾರ್ಖಾನೆ. ರಮೇಶ್ ಜಾರಕಿಹೊಳಿ ನಮ್ಮ ಜತೆ ಇರುವಾಗ ಸರಿಯಾಗಿದ್ದರು, ಈಗ ಅಲ್ಲಿದವರ ಹಾಗೆಯೇ ಆಗಿಬಿಟ್ಟಿದ್ದಾರೆ” ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos