ನವದೆಹಲಿ, ಸೆ. 26 : ದಿನಸಿ ಅಂಗಡಿ ಮಾಲೀಕರೊಬ್ಬರು ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲ. 13 ವರ್ಷಗಳಿಂದ 300 ಬಡ ಮಕ್ಕಳಿಗಾಗಿ ಉಚಿತ ಶಾಲೆ ನಡೆಸುವ ಮೂಲಕ ಮಾದರಿ. ಉತ್ತರಪ್ರದೇಶ ಮೂಲದ ರಾಜೇಶ್ ದೆಹಲಿಯಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದಾರೆ. ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ ಬಡ ಮಕ್ಕಳಿಗಾಗಿ ಉಚಿತ ಶಾಲೆ ನಡೆಸುತ್ತಿದ್ದಾರೆ.
ರಾಜೇಶ್ ಕಳೆದ 13 ವರ್ಷದಿಂದ ಉಚಿತ ಶಾಲೆ ನಡೆಸಿಕೊಂಡು ಬಂದಿದ್ದಾರೆ. ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳು ಹೊತ್ತು ಊಟಕ್ಕಾಗಿ ಕೂಲಿ ಮಾಡಿಕೊಂಡು ಕಷ್ಟ ಪಡುತ್ತಾರೆ. ಹೀಗಿರುವಾಗ ಇಲ್ಲಿನ ಮಕ್ಕಳಿಗೆ ಶಿಕ್ಷಣ ನೀಡೋದು ಬಡ ಪೋಷಕರಿಗೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಈ ಬಡ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ರಾಜೇಶ್ ಈ ಶಾಲೆ ನಡೆಸುತ್ತಿದ್ದಾರೆ.