ಬಾಗಲಕೋಟೆ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ್ ನಾಮಪತ್ರ ಸಲ್ಲಿಕೆ

ಬಾಗಲಕೋಟೆ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ್ ನಾಮಪತ್ರ ಸಲ್ಲಿಕೆ

ಬಾಗಲಕೋಟೆ, . 1, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿರುವ ವೀಣಾ ಕಾಶಪ್ಪನವರ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಜಿಲ್ಲೆಯ ಇಳಕಲ್ ನಗರದಲ್ಲಿ ಗೋಮಾತೆಗೆ ಪೂಜೆ ಮಾಡಿ, ಲಿಂಗೈಕ್ಯ ಸಿದ್ದಗಂಗಾ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಿದ್ದಾರೆ.

ನಂತರ ಮಧ್ಯಾಹ್ನ 1:30ಕ್ಕೆ ಜಿಲ್ಲಾಡಳಿತ ಭವನದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬಳಿಕ ನಗರದಲ್ಲಿ ಮೈತ್ರಿ ಪಕ್ಷಗಳ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಬೃಹತ್ ಮೆರವಣಿಗೆ ಆಯೋಜಿಸಲಾಗಿದೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ 5 ಗಂಟೆಗೆ ಸಮಾವೇಶ ಹಮ್ಮಿಕೊಳ್ಳುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿ.ಎಂ.ಇಬ್ರಾಹಿಂ ಸೇರಿದಂತೆ ಜಿಲ್ಲೆಯ ಹಾಲಿ, ಮಾಜಿ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos