ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಇಂದು ಮಹತ್ವದ ದಿನವಾಗಿದ್ದು ಇಂದಾದರೂ ನಟ ದರ್ಶನ್ ಅವರಿಗೆ ಜಾಮೀನು ಸಿಗುತ್ತಾ ಎಂದು ಕಾದು ನೋಡುತ್ತಿದ್ದಾರೆ.
ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ 26 ದಿನಗಳಿಂದ ಮುದ್ದೆ ಮುರಿಯುತ್ತಿದ್ದಾರೆ. ಜಾಮೀನಿಗೆ ಅರ್ಜಿ ಹಾಕಿರೋ ಆರೋಪಿ ದರ್ಶನ್ಗೆ ಇಂದು ಮಹತ್ವದ ದಿನವಾಗಿದೆ. ಶನಿವಾರ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದ ದರ್ಶನ್ ಪರ ವಕೀಲರು ತುರ್ತಾಗಿ ವಿಚಾರಣೆ ಮಾಡುವಂತೆ ಮನವಿ ಮಾಡಿದ್ದರು. ಸೋಮವಾರಕ್ಕೆ ಜಾಮೀನು ಅರ್ಜಿ ಮುಂದೂಡಲಾಗಿತ್ತು. ಹೀಗಾಗಿ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಜಾಮೀನು ಅರ್ಜಿ ವಿಚಾರವಾಗಿ ಜೈಲು ಸಿಬ್ಬಂದಿಯಿಂದ ಪದೇ ಪದೇ ಮಾಹಿತಿ ಪಡೆಯುತ್ತಿದ್ದಾರೆ. ಇದೇ ಕಾರಣಕ್ಕೆ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ವಕೀಲರು ಜೈಲಿಗೆ ಭೇಟಿ ನೀಡುವ ಸಾಧ್ಯತೆಯಿದೆ.
ಒಂದು ವೇಳೆ ಜಾಮೀನು ಸಿಗದೇ ಇದ್ದರೆ ಮುಂದೆ ಜೈಲು ಬದಲಾವಣೆಯ ಬಗ್ಗೆಯೂ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ.