ಪಿ.ಚಿದಂಬರಂಗೆ ಜಾಮೀನು

ಪಿ.ಚಿದಂಬರಂಗೆ ಜಾಮೀನು

ನವದೆಹಲಿ, ಡಿ. 04: ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂಗೆ ಇಂದು ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಚಿದಂಬರಂ ದೇಶ ಬಿಟ್ಟು ಹೋಗುವಂತಿಲ್ಲ ಹಾಗೂ ವಿಚಾರಣೆ ಅಗತ್ಯವಿದ್ದಾಗಲೆಲ್ಲಾ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಕೋರ್ಟ್ ಜಾಮೀನು ನೀಡಿ ಆದೇಶಿಸಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಳೆದ 105 ದಿನಗಳಿಂದ ಚಿದಂಬರಂ ತಿಹಾರ್ ಜೈಲಿನಲ್ಲಿದ್ದರು. ಆಗಸ್ಟ್ 21 ರಂದು ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅವರನ್ನು ಬಂಧಿಸಿತ್ತು. ಇದಲ್ಲದೇ ಅಕ್ಟೋಬರ್ 22 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು.

ಅವರ ಜಾಮೀನು ಕುರಿತು ವಿಚಾರಣೆ ನಡೆಸಿದ್ದ ಕೋರ್ಟ್ ನವಂಬರ್ 28ರಂದು ಆದೇಶವನ್ನು ಮೀಸಲಿರಿಸಿತ್ತು. ಸದ್ಯ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos