30 ಬಾಂಗ್ಲಾ ಪ್ರಜೆಗಳ ಬಂಧನ

30 ಬಾಂಗ್ಲಾ ಪ್ರಜೆಗಳ ಬಂಧನ

ಬೆಂಗಳೂರು, ಅ.26 : ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಶನಿವಾರ ಬೆಳಗ್ಗೆ ಬೆಂಗಳೂರು ನಗರದ ವಿವಿಧಡೆ ಅಕ್ರಮವಾಗಿ ನೆಲೆಸಿರುವ ಸ್ಥಳಗಳಲ್ಲಿ ಶೋಧ ನಡೆಸಿ 30 ಬಾಂಗ್ಲಾದೇಶ ಪ್ರಜೆಗಳನ್ನು ಬಂಧಿಸಿದ್ದಾರೆ.
ಬಂಧಿತರ ವಿರುದ್ಧ ವಿದೇಶಿಯರ ನೋಂದಣೆ ಕಾಯ್ದೆ ಅನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos