ಬೆಂಗಳೂರಿನ 3 `ಲೋಕಸಭಾ ಕ್ಷೇತ್ರ’ಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ?

ಬೆಂಗಳೂರಿನ 3 `ಲೋಕಸಭಾ ಕ್ಷೇತ್ರ’ಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ?

ಬೆಂಗಳೂರು, ಮಾ.30, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯ ಮೊದಲ ಹಂತವು ಏ. 18 ರಿಂದ ರಾಜ್ಯದಲ್ಲಿ ನಡೆಯಲಿದ್ದು, ಮೊದಲ ಹಂತದ ಚುನಾವಣೆಯಲ್ಲಿ ಬೆಂಗಳೂರಿನ 3 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಅಂತಿಮ ಕಣದಲ್ಲಿ 78 ಅಭ್ಯರ್ಥಿಗಳು ಉಳಿದಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಚಿವ ಕೃಷ್ಣ ಬೈರೇಗೌಡ, ಬಿಜೆಪಿ ಅಭ್ಯರ್ಥಿ ಸದಾನಂದಗೌಡ ಸೇರಿದಂತೆ 31ಸ್ಪರ್ಧಿಗಳು ಸ್ಪರ್ಧಿಸಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್, ಬಿಜೆಪಿಯ ತೇಜಸ್ವಿ ಸೂರ್ಯ ಸೇರಿ ಒಟ್ಟು 25 ಸ್ಪರ್ಧಿಗಳು ಕಣದಲ್ಲಿದ್ದಾರೆ.

ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ನಿಂದ ರಿಜ್ವಾನ್ ಅರ್ಷಾದ್, ಬಿಜೆಪಿಯಿಂದ ಪಿ.ಸಿ. ಮೋಹನ್, ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್ ರೈ ಸೇರಿದಂತೆ ಒಟ್ಟು 22 ಜನರು ಕಣದಲ್ಲಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ 2,656 ಮತಗಟ್ಟೆ ಸ್ಥಾಪಿಸಲಾಗಿದೆ. ಇವುಗಳಲ್ಲಿ 577 ಸೂಕ್ಷ್ಮ ಹಾಗೂ 34 ಅತೀ ಸೂಕ್ಷ್ಮ ಮತಗಟ್ಟೆಗಳಿವೆ.

ಫ್ರೆಶ್ ನ್ಯೂಸ್

Latest Posts

Featured Videos