ಸಿಲಿಕಾನ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು!

  • In Crime
  • May 21, 2019
  • 92 Views
ಸಿಲಿಕಾನ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು!

ಬೆಂಗಳೂರುಮೇ. 21, ನ್ಯೂಸ್ ಎಕ್ಸ್ ಪ್ರೆಸ್: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದ್ದು, ಕಾರು ಚಾಲಕನನ್ನು ಜೀವಂತವಾಗಿ ಸುಟ್ಟಿದ್ದ ನಟೋರಿಯಸ್ ಮೇಲೆ ಪೊಲೀಸರು ಇಂದು ಫೈರಿಂಗ್ ಮಾಡಿದ್ದಾರೆ.ನೆಲಮಂಗಲ ಸಿಪಿಐ ಅನಿಲ್ ಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆರೋಪಿ ಹೇಮಂತ್ ಸಾಗರ್ ಹಾಗೂ ವಿನೋದ್ ಕುಮಾರ್ ನನ್ನು ಸೆರೆಹಿಡಿಯಲು ಹೋಗಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಪಿಎಸ್‍ಐ ನವೀನ್ ಕುಮಾರ್ ಗೆ ಗಾಯಗಳಾಗಿದ್ದು, ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳ ಮೇಲೆ ರಾಮನಗರ, ಮಂಡ್ಯ, ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಕೇಸ್ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos