ಬೆಂಗಳೂರು ಉತ್ತರ ಮೈತ್ರಿ ಪಕ್ಷ ಕಾಂಗ್ರೆಸ್ ಪಾಲು!

ಬೆಂಗಳೂರು ಉತ್ತರ ಮೈತ್ರಿ ಪಕ್ಷ ಕಾಂಗ್ರೆಸ್ ಪಾಲು!

ಬೆಂಗಳೂರು, ಮಾ, 21, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಪಕ್ಷಗಳೆಲ್ಲಾ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ರಾಜ್ಯದಲ್ಲೂ ರಾಜಕೀಯ ಮುಖಂಡರು ಮತದಾರ ಓಲೈಕೆಯಲ್ಲಿ ತೊಡಗಿಸಿಕೊಂಡಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕಿಳಿಯುತ್ತಿವೆ. ಈಗಾಗಲೇ ಕ್ಷೇತ್ರ ಹಂಚಿಕೆ ನಡೆದಿದ್ದು, ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ. ಆದರೀಗ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹತ್ತರ ಬೆಳವಣಿಗೆಗಳಾಗಿವೆ. ಎಲ್ಲವೂ ಸರಿಯಾಗಿದೆ ಎನ್ನುವಷ್ಟರಲ್ಲಿ ಗೌಡರು ಈ ಕ್ಷೇತ್ರದಿಂದ ಹಿಂದೆ ಸರಿದಿದ್ದು, ಬೆಂಗಳೂರು ಉತ್ತರ ಕಾಂಗ್ರೆಸ್ ಪಾಲಾಗಿದೆ. ಹೌದು ಮೈತ್ರಿ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ನಡೆದಂದಿನಿಂದಲೂ ಬೆಂಗಳೂರು ಉತ್ತರ ಕ್ಷೇತ್ರ ಭಾರೀ ಸದ್ದು ಮಾಡಿತ್ತು. ಇಲ್ಲಿಂದ ದೇವೇಗೌಡರೇ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗಿತ್ತಾದರೂ ತುಮಕೂರಿನ ಮೇಲೂ ಗೌಡರು ಕಣ್ಣಿಟ್ಟಿದ್ದರು. ಹೀಗಾಗಿ ಗೊಂದಲಗಳು ಏರ್ಪಟ್ಟಿದ್ದವು. ಆದರೀಗ ದೇವೇಗೌಡರು ಬೆಂಗಳೂರು ಉತ್ತರದಿಂದ ಸ್ಪರ್ಧಿಸುವ ನಿರ್ಧಾರವನ್ನು ಕೈ ಬಿಟ್ಟಿದ್ದಾರೆ ಹಾಗೂ ಹೀಗಾಗಿ ಈ ಕ್ಷೇತ್ರವನ್ನು ಜೆಡಿಎಸ್ ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ. ಕಾಂಗ್ರೆಸ್ ತೆಕ್ಕೆಗೆ ಸೇರಿರುವ ಈ ಕ್ಷೇತ್ರದಿಂದ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಒಕ್ಕಲಿಗ ಮುಖಂಡರಾಗಿರುವ ಕಾಂಗ್ರೆಸ್ ನ ಬಿ.ಎಲ್.ಶಂಕರ್ ಸ್ಪರ್ಧಿಸುವ ಸಂಭವವಿದೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos