ಕೋವಿಡ್ ಚಿಕಿತ್ಸೆಗೆ ದರ ನಿಗಧಿ

ಕೋವಿಡ್ ಚಿಕಿತ್ಸೆಗೆ ದರ ನಿಗಧಿ

ಬೆಂಗಳೂರು : ಕೋವಿಡ್ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟ ಸದಸ್ಯರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮುಂದಿನ 15 ದಿನ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಮಾತ್ರ ಕೊರೋನಾ ನಿಯಂತ್ರಿಸಲು ಸಾಧ್ಯ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮವಹಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದರು.

ವಿವಿಪುರಂ, ಸಿದ್ದಾಪುರ ವಾರ್ಡ್, ಕಲಾಸಿ ಪಾಳ್ಯ, ಕೆ.ಆರ್ ಮಾರ್ಕೆಟ್ ಸುತ್ತಮುತ್ತಲಿನ ಪ್ರದೇಶಗಳು ಸೀಲ್ ಡೌನ್ ಮಾಡುವಂತೆ, ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು. ಅಲ್ಲದೆ ಪ್ರತಿ ವರ‍್ಡಿನಲ್ಲಿ ಫೀವರ್ ಕ್ಲಿನಿಕ್ ಸ್ಥಾಪಿಸಲು ನರ‍್ಧರಿಸಲಾಯಿತು.

ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯರ‍್ಥಿನಿಲಯಗಳು ಮತ್ತಿತರ ರ‍್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌರ‍್ಯ ಒದಗಿಸುವಂತೆ ತಿಳಿಸಲಾಯಿತು.

ಫ್ರೆಶ್ ನ್ಯೂಸ್

Latest Posts

Featured Videos