ಬೆಂಗಳೂರು:ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ.!?

ಬೆಂಗಳೂರು:ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ.!?

ಬೆಂಗಳೂರು ಮೇ. 31, ನ್ಯೂಸ್ ಎಕ್ಸ್ ಪ್ರೆಸ್: ನಗರದ ಸಂಗೋಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಫ್ಲಾಟ್ ಫಾರಂ ನಂಬರ್ 1  ರಲ್ಲಿ ಅನುಮಾನಾಸ್ಪದ ವಸ್ತುವನ್ನು ಕಂಡು ಪ್ರಯಾಣಿಕರು ಬೆಚ್ಚಿ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಪ್ರತಿದಿನ ಸಾವಿರಾರು ಜನ ಪ್ರಯಾಣೆಕರು ಓಡಾಡುವ ಸ್ತಳದಲ್ಲಿ ಅನುಮಾನಾಸ್ಪದ ವಸ್ತು ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಇನ್ನು ಜನರು ಅನುಮಾನಸ್ಪದ ವಸ್ತು ಬಾಂಬ್ ಅಂತ ಭಾವಿಸಿದ ಪರಿಣಾಮ ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ ಎನ್ನಲಾಗಿದೆ. ಜನರಲ್ಲಿ ಆತಂಕದ ವಾತವಾರಣ ನಿರ್ಮಾಣವಾಗಿದ್ದು, ಕೆಲವು ರೈಲುಗಳ ಸಂಚಾರವನ್ನು ಕೆಲ ನಿಮಿಷಗಳ ಕಾಲ ನಿಲ್ಲಿಸಲಾಗಿದೆ ಎನ್ನಲಾಗಿದೆ.

ಸ್ಥಳಕ್ಕೆ ರೈಲ್ವೆ ಪೊಲೀಸರು, ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬಂದಿಗಳು ಆಗಮಿಸಿ ವ್ಯಾಪಕ ತಪಾಸಣೆ ನಡೆಸುತ್ತಿದ್ದಾರೆ.

ನಿಲ್ದಾಣದ ಫ್ಲಾಟ್ ಫಾರಂನಲ್ಲಿದ್ದ ಪ್ರಯಾಣಿಕರನ್ನು ಹೊರಗೆ ಕಳುಹಿಸಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ.

ಪತ್ತೆಯಾದ ಗ್ರನೇಡ್ ಮಾದರಿಯ ವಸ್ತುವನ್ನು ಬಾಂಬ್ ನಿಷ್ಕ್ರಿಯ ದಳದವರು ವಶಕ್ಕೆ ಪಡೆದಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos