ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕಲಬುರಗಿ, ಜ.7 : ಬ್ಯಾಂಕ್ ನ ಮಹಿಳಾ ಉದ್ಯೋಗಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.
ತೆಲಂಗಾಣ ಮೂಲದ ಪ್ರಿಯಾಂಕಾ (25 ) ಎಂಬುವವರು ನಗರದ ಖಾಸಗಿ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಕಲಬುರಗಿಯ ಸಿಂಡಿಕೇಟ್ ಬ್ಯಾಂಕ್ ನ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ .
ತಾವು ವಾಸಿಸುತ್ತಿದ್ದ ಪಿಜಿಯಲ್ಲಿಯೇ ಪ್ರಿಯಾಂಕಾ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos