ಕರೂರ್ ವೈಶ್ಯ ಬ್ಯಾಂಕ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರೂರ್ ವೈಶ್ಯ ಬ್ಯಾಂಕ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏ. 1, ನ್ಯೂಸ್ ಎಕ್ಸ್ ಪ್ರೆಸ್: ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ಗೆ ಹೋಗಿ ಏ. 7,2019ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಹುದ್ದೆಗಳಿಗೆ ಇಂಜಿನಿಯರಿಂಗ್ನಲ್ಲಿ ಪದವಿ ಅಥವಾ ಎಂಸಿಎ, ಪದವಿ ಮತ್ತು ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಹುದ್ದೆಗಳಿಗೆಗನುಸಾರ ಗರಿಷ್ಟ 50  ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಕೆವಿ ಬ್ಯಾಂಕ್ ನಿಯಮಾನುಸಾರ ವೇತನವನ್ನು ನೀಡಲಾಗುವುದು

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವುದು: ಅಭ್ಯರ್ಥಿಗಳು ಕರೂರ್ ವೈಶ್ಯ ಬ್ಯಾಂಕ್ನ ಅಧಿಕೃತ ವೆಬ್ಸೈಟ್ https://www.kvb.co.in/?utm_source=DH-MoreFromPub&utm_medium=DH-app&utm_campaign=DH ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos