ಬಿಎಸ್ ವೈ ಹೆಸರಿಗೆ ಕಳಂಕ ತರುವ ಕೆಲಸ: ಬಸವರಾಜ ಬೊಮ್ಮಾಯಿ!

ಬಿಎಸ್ ವೈ ಹೆಸರಿಗೆ ಕಳಂಕ ತರುವ ಕೆಲಸ: ಬಸವರಾಜ ಬೊಮ್ಮಾಯಿ!

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೂ ಪ್ರಕರಣ ದಾಖಲಾದ ವಿಚಾರಕ್ಕೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಈಗಾಗಲೇ ಗೃಹ ಸಚಿವರು ಇದನ್ನು ಜವಾಬ್ದಾರಿಯಿಂದ ತನಿಖೆ ಮಾಡಬೇಕು ಅಂತಾ ಹೇಳಿದ್ದಾರೆ ಅಂತಾ ಹೇಳಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಇದು ಬಿಎಸ್ ವೈ ಅವರ ಹೆಸರಿಗೆ ಕಳಂಕ ತರುವ ಕೆಲಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೂರು ಕೊಟ್ಟವರು ಈ ಹಿಂದೆ ಬೇರೆಯವರ ಮೇಲೆ‌ ದೂರು ಕೊಟ್ಟಿದ್ದು, ಅವರ ಮಾನಸಿಕ ಅಸ್ವಸ್ಥತೆ ಕುರಿತು ವಿಚಾರಣೆ ಮಾಡೋದಾಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ,  ಈಗಾಗಲೇ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ದೂರು ದಾಖಲಾದ ತಕ್ಷಣ ಕ್ರಮ ಕೈಗೊಳ್ಳಲಾಗುವುದಿಲ್ಲ. ಜವಾಬ್ದಾರಿಯಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದರು.

ಗೃಹ ಸಚಿವರು ಹೇಳಿಕೆ ಕೊಟ್ಟಿರುವುದು ಸರಿಯಾಗಿದೆ. ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಅಂದಿದ್ದಾರೆ.  ಬಿಎಸ್ ವೈ ಹೆಸರಿಗೆ ಕಳಂಕ ತರುವ ಕೆಲಸವಾಗಿದೆ.  ಕೇಸ್ ದಾಖಲಿಸುವುದರ ಹಿಂದೆ  ಸದುದ್ದೇಶ ಇಲ್ಲ. ಚುನಾವಣೆ ವೇಳೆ ಈ ರೀತಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos