ಬಿಬಿಎಂಪಿ ಮೇಯರ್ ಚುನಾವಣೆ ನಾಳೆ ..!

ಬಿಬಿಎಂಪಿ ಮೇಯರ್ ಚುನಾವಣೆ ನಾಳೆ ..!

ಬೆಂಗಳೂರು, ಸೆ. 30 : ಕ್ಷಣ ಕ್ಷಣಕ್ಕೂ ಬಿಬಿಎಂಪಿ ಚುನಾವಣೆ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನಾಳೆ ನಡೆಯಬೇಕಾಗಿದ್ದ ಬಿಬಿಎಂಪಿ ಚುನಾವಣೆ ಮುಂದೂಡುವಂತೆ ಆದೇಶ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಲ್ಲಿಂದು ಹೇಳಿಕೆ ನೀಡಿದ್ದರು. ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಚುನಾವಣೆ ಮುಂದೂಡಿಕೆಗೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆದೇಶದ ಹೊರತಾಗಿಯೂ ನಾಳೆಯೇ ಬಿಬಿಎಂಪಿ ಮೇಯರ್, ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಸುವುದಾಗಿ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಸ್ಪಷ್ಟಪಡಿಸಿದ್ದಾರೆ.
ಇನ್ನೇನು ಚುನಾವಣೆ ಮುಂದೂಡಿಕೆಯಾಗುತ್ತದೆ ಎಂಬ ನಿರೀಕ್ಷೆಗಳಿದ್ದವು. ಆದರೆ, ದಿಢೀರ್ ಬೆಳವಣಿಗೆಯಲ್ಲಿ ನಿಗದಿಯಂತೆ ನಾಳೆಯೇ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಮತ್ತು ನಾಲ್ಕು ಸ್ಥಾಯಿ ಸಮಿತಿ ಆಯ್ಕೆಗೆ ಚುನಾವಣೆಯ ಮುಹೂರ್ತ ನಿಗದಿಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos