ಅನಧಿಕೃತ ಕಟ್ಟಡ ತೆರವಿಗೆ ಬಿಬಿಎಂಪಿ ಸೂಚನೆ

ಅನಧಿಕೃತ ಕಟ್ಟಡ ತೆರವಿಗೆ ಬಿಬಿಎಂಪಿ ಸೂಚನೆ

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಕಟ್ಟಡಗಳನ್ನು ಕಟ್ಟಿದ್ದರೆ ಅಂತಹ ಕಟ್ಟಡಗಳನ್ನು ತೆರವು ಗೊಳಿಸಲಾಗುವುದು ಎಂದು ಬಿಬಿಎಂಪಿ ಮನೆ ಮಾಲೀಕರಿಗೆ ಎಚ್ಚರಿಕೆ ನೀಡಿದೆ.

ಮಹದೇವಪುರ ವಲಯ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡ ಹಾಗೂ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಿದ ಕಟ್ಟಡಗಳನ್ನು ಗುರುತಿಸಿ, ಸೂಕ್ತ ಪರಿಶೀಲನೆ ನಡೆಸಿ ತ್ವರಿತವಾಗಿ ಅವುಗಳನ್ನು ತೆರವು ಕಾರ್ಯ ನಡೆಸುವಂತೆ ಮುಖ್ಯ ಆಯುಕ್ತರಾದ ಶ್ರೀ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚಿಸಿದರು.

ನಲ್ಲೂರುಹಳ್ಳಿ ಮೆಟ್ರೋ ಸ್ಟೇಷನ್ ನಿಂದ  ನಲ್ಲೂರಹಳ್ಳಿ ಬೋರ್ವೆಲ್ ರಸ್ತೆ  ಮುಖಾಂತರ ವೈಟ್ ಫೀಲ್ಡ್ ಮುಖ್ಯ ರಸ್ತೆವರೆಗೆ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತರು ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅನಧಿಕೃತ ಕಟ್ಟಡ ತೆರವಿಗೆ ಸೂಚನೆ

ನಲ್ಲೂರಹಳ್ಳಿ ಕಾಲೊನಿಯ 3ನೇ ಅಡ್ಡರಸ್ತೆ ಹಾಗೂ 7ನೇ ಅಡ್ಡರಸ್ತೆಯಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ನಿಯಮಾನುಸಾರ ಅನಧಿಕೃತ ಕಟ್ಟಡದ ಭಾಗವನ್ನು ತ್ವರಿತವಾಗಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಟ್ಟಡ ಮಾಲೀಕರಿಗೆ ನೊಟೀಸ್

ಡಾಡ್ಸ್ ವರ್ತ್ ಎನ್ಕ್ಲೇವ್ ರೋಡ್ ಬಳಿ ಚರಂಡಿಯ ನೀರು ರಸ್ತೆಗೆ ಬರುತ್ತಿದ್ದು, ಈ ವಿಷಯಕ್ಕೆ‌ ಸಂಬಂಧಿಸಿದಂತೆ ಸೂಕ್ತ ಪರಿಶೀಲನೆ ನಡೆಸಿ ಕಟ್ಟಡದ ‌ಮಾಲೀಕರಿಗೆ ನೋಟಿಸ್ ನೀಡಲು ಹಾಗೂ ಕಟ್ಟಡ ಮಾಲೀಕರಿಗೆ ದಂಡ ವಿಧಿಸಲು  ಸೂಚಿಸಿದರು.

ಅನಧಿಕೃತ ವಾಹನ ನಿಲುಗಡೆ, ವಾಹನಗಳ‌ ಮೇಲೆ ದಂಡ

ನಲ್ಲೂರಹಳ್ಳಿ ಮುಖ್ಯ ರಸ್ತೆಯು ಅಧಿಕ ಸಂಚಾರ ದಟ್ಟಣೆಯನ್ನು ಹೊಂದಿದ್ದು, ರಸ್ತೆಯ ಇಕ್ಕೆಲಗಳಲ್ಲಿ  ವಾಹನಗಳನ್ನು ನಿಲ್ಲಿಸಿರುವುದು ಕಂಡುಬಂದಿದ್ದು, ಮುಖ್ಯ ಆಯುಕ್ತರು ವಾಹನಗಳ‌ ಮೇಲೆ ದಂಡ ವಿಧಿಸಿ ಸಂಚಾರಿ ಪೊಲೀಸ್ ಮೂಲಕ ವಾಹನಗಳನ್ನು ತೆರವುಗೊಳಿಸಲು ನಿರ್ದೇಶಿಸಿದರು.

ರಾಜಕಾಲುವೆ ಪರಿಶೀಲನೆ

ನಲ್ಲೂರಹಳ್ಳಿ ರಾಜಕಾಲುವೆ ಪರಿಶೀಲಿಸಿದ ಮುಖ್ಯ ಆಯುಕ್ತರು, ರಾಜಕಾಲುವೆಗೆ ತಡೆಗೋಡೆ ನಿರ್ಮಿಸುವ ಅಗತ್ಯವಿದ್ದು ತ್ವರಿತವಾಗಿ ಸೂಕ್ತ ಕ್ರಮ ಕೈಗೊಂಡು ನಾಲಾ ಪಕ್ಕದಲ್ಲಿ ನಿರ್ಮಿಸಿರುವ ಅಕ್ರಮ ಕಟ್ಟಡ ತೆರವುಗೊಳಿಸಿ, ಬಫರ್ ಜೋನ್ ನಲ್ಲಿ ಯಾವುದೇ ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡದಂತೆ ಸೂಚಿಸಿದರು.

ನಲ್ಲೂರಹಳ್ಳಿ ಮುಖ್ಯ ರಸ್ತೆ ಅಗಲೀಕರಣಕ್ಕೆ ಸೂಚನೆ

ನಲ್ಲೂರಹಳ್ಳಿ ಮೆಟ್ರೋ ಸ್ಟೇಷನ್ ನಿಂದ ನಲ್ಲೂರಹಳ್ಳಿ ಬೋರ್ವೆಲ್ ರಸ್ತೆ  ಮುಖಾಂತರ ವೈಟ್ ಫೀಲ್ಡ್ ಮುಖ್ಯ ರಸ್ತೆಯವರೆಗೆ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಸಿ.ಡಿ.ಪಿ ಯೋಜನೆಯ ಪ್ರಕಾರ ರಸ್ತೆ ಅಗಲೀಕರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಪರಿಶೀಲನೆಯ ವೇಳೆ ವಲಯ ಆಯುಕ್ತರಾದ ಶ್ರೀ ರಮೇಶ್, ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತರರಾದ ಶ್ರೀ ಲೋಕೇಶ್, ಕಾರ್ಯಪಾಲಕ ಅಭಿಯಂತರರು, ಬೆಸ್ಕಾಂ ಹಾಗೂ ಜಲಮಂಡಳಿಯ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos