ರೈತರು ವದಂತಿಗಳಿಗೆ ಕಿವಿಗೊಡಬಾರದು

ರೈತರು ವದಂತಿಗಳಿಗೆ ಕಿವಿಗೊಡಬಾರದು

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ರೈತರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ. ಯಾವುದೇ ಕೊರತೆಯಾಗದಂತೆ ಕ್ರಮವಹಿಸಲಾಗಿದೆ ಎಂದು ಬಿ.ಸಿ.ಪಾಟೀಲ ಹೇಳಿದ್ದಾರೆ.

ಮೇ ಮತ್ತು ಜೂನ್ ಅವಧಿಯಲ್ಲಿ ದೇಶಾದ್ಯಂತ ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬೇಡಿಕೆ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಹೆಚ್ಚುವರಿಯಾಗಿ ರಸಗೊಬ್ಬರಕ್ಕೆ ಯಾವುದೇ ಬೇಡಿಕೆ ಎದುರಾದರೂ ಇಲಾಖೆ ಪೂರೈಸಲಿದೆ ಎಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos