ಯುಪಿ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ಗೆ ಭರ್ಜರಿ ಜಯ

ಯುಪಿ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ಗೆ ಭರ್ಜರಿ ಜಯ

ಬೆಂಗಳೂರು: ಮಹಿಳೆಯರ ಪ್ರೀಮಿಯರ್ ಲೀಗ್‌ನ ನಾಲ್ಕನೇ ಪಂದ್ಯ ಯುಪಿ ವಾರಿಯರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಎರಡೂ ತಂಡಗಳು ಹಿಂದಿನ ಪಂದ್ಯದಲ್ಲಿ ಸೋಲು ಕಂಡಿವೆ.

ಹೀಗಾಗಿ ಉಭಯ ತಂಡಗಳು ಮೊದಲ ಗೆಲುವಿಗಾಗಿ ಹಾತೊರೆಯುತ್ತಿವೆ. ಏಕೆಂದರೆ ಈ ಪಂದ್ಯದ ಸೋಲು ಲೀಗ್​ನಲ್ಲಿ ತಂಡದ ಮುಂದಿನ ಪಯಣಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ. ಹೀಗಾಗಿ ಎರಡೂ ತಂಡಗಳಿಗೂ ಗೆಲುವಿನ ಅನಿವಾರ್ಯತೆ ಎದುರಾಗಿದೆ.

ಏತನ್ಮಧ್ಯೆ, ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಲೀಗ್​ನಲ್ಲಿ ಮೊದಲ ಜಯ ಸಾಧಿಸಿದೆ. ಇತ್ತ ಯುಪಿ ವಾರಿಯರ್ಸ್ ಆಡಿದ ಎರಡೂ ಪಂದ್ಯಗಳನ್ನು ಸೋತು ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 119 ರನ್​ಗಳಿಸಲಷ್ಟೇ ಶಕ್ತವಾಯಿತು.

119 ರನ್​ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಮೆಗ್ ಲ್ಯಾನಿಂಗ್ 51 ರನ್ ಸಿಡಿಸಿ ಅಂತಿಮ ಹಂತದಲ್ಲಿ ವಿಕೆಟ್ ಒಪ್ಪಿಸಿದರೆ, ಶಫಾಲಿ ವರ್ಮಾ ಅಜೇಯ 64 ರನ್ ಕಲೆಹಾಕಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos