ಬೆದರಿಕೆ ಹಾಕುಲು ಬಂದಿಲ್ಲ : ಡಿಕೆಶಿ

ಬೆದರಿಕೆ ಹಾಕುಲು ಬಂದಿಲ್ಲ : ಡಿಕೆಶಿ

ಮುಂಬೈ, ಜು. 10 : ಅತೃಪ್ತರ ಶಾಸಕರನ್ನು ಭೇಟಿ ಮಾಡಲು ಮುಂಬೈಗೆ ತೆರಳಿರುವ ಸಚಿವ ಡಿ.ಕೆ ಶಿವಕುಮಾರ್ ಪೊಲೀಸರು ಹೋಟೆಲ್ ಒಳಗಡೆ ಬಿಡಲು ನಿರಾಕರಿಸಿದ್ದಾರೆ. ಮುಂಬೈ ಪೊಲೀಸರು ಮಾತುಕತೆ ನಡೆಸುವ ಮೂಲಕ ಭಾರೀ ಹೈಡ್ರಾಮವೇ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘’ನನ್ನ ಸ್ನೇಹಿತರು ಈ ಹೋಟೆಲ್ನಲ್ಲಿದ್ದಾರೆ. ಅವರನ್ನು ಭೇಟಿ ಮಾಡಲು ಬಂದಿದ್ದೇನೆ ಹೊರತು ಯಾರಿಗೂ ನಾನು ಬೆದರಿಕೆ ಹಾಕಲು ಬಂದಿಲ್ಲ. ಹೋಟೆಲ್ ಒಳಗೆ ಬಿಡದಿದ್ದರೆ ಇಡೀ ದಿನ ಇಲ್ಲೇ ಕಾಯ್ತೀನಿ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಸಿಎಂ ಫೆರ್ನಾಂಡಿಸ್ ನನ್ನ ಸ್ನೇಹಿತ, ನಾನು ಇಲ್ಲಿ ರೂಮ್ ಬುಕ್ ಮಾಡಿದ್ದೇನೆ. ನನ್ನ ಕುಟುಂಬದ ಸಹೋದರರು ಇಲ್ಲಿನ ಹೋಟೆಲ್ ರೂಮ್ನಲ್ಲಿ ಇದ್ದಾರೆ. ಅವರನ್ನು ಭೇಟಿ ಮಾಡಲು ಬಂದಿದ್ದೇನೆ. ಯಾರಿಗೂ ನಾನು ಬೆದರಿಕೆ ಹಾಕಲು ಬಂದಿಲ್ಲ. ನನ್ನ ಕುಟುಂಬದಲ್ಲಿ ಸ್ವಲ್ಪ ಬಿರುಕು ಉಂಟಾಗಿದೆ. ಅದನ್ನು ನಾವು ಸರಿಪಡಿಸಿಕೊಳ್ಳುತ್ತೇವೆ. ಒಂದೇ ಸರಿ ನಾವು ಬೇರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
.

ಫ್ರೆಶ್ ನ್ಯೂಸ್

Latest Posts

Featured Videos