ಬೆಂಗಳೂರು, ಮೇ. 23, ನ್ಯೂಸ್ ಎಕ್ಸ್ ಪ್ರೆಸ್: ಮತ ಎಣಿಕೆ ಪ್ರಾರಂಭಕ್ಕೆ ಕೆಲವೇ ಕ್ಷಣಗಳು ಬಾಕಿ ಇವೆ. ಇಂದು ರಾತ್ರಿಯೊಳಗೆ ಫಲಿತಾಂಶ ಹೊರಬೀಳಲಿದೆ. ಮಾಜಿ ಸಚಿವ ಅನಂತ್ಕುಮಾರ್ ಅವರ ಪತ್ನಿ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ನಾಯಕಿ ತೇಜಸ್ವಿನಿ ಅನಂತ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
ತಮ್ಮ ಪತಿ ಅನಂತ್ ಕುಮಾರ್ ಅವರನ್ನು ನೆನಪಿಸಿಕೊಂಡ ಅವರು, ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು 1991ರಿಂದ ಪ್ರಾರಂಭವಾಯಿತು. ಅನಂತ್ಕುಮಾರ್ ಯಾವುದೇ ಹಗರಣ, ಭ್ರಷ್ಟಾಚಾರವಿಲ್ಲದೆ ಆಡಳಿತ ನಡೆಸಿದ್ದರು ಎಂದು ಟ್ವೀಟ್ ಮಾಡಿದ್ದಾರೆ. ಬಿಜೆಪಿ ಪಕ್ಷ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಶುಭ ಹಾರೈಸಿದ್ದಾರೆ