ಬೆಂಗಳೂರು, ಮಾ. 23, ನ್ಯೂಸ್ ಎಕ್ಸ್ ಪ್ರೆಸ್: ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಡೆಪ್ಯುಟಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏ. 3,2019 ರೊಳಗೆ ಕಳುಹಿಸಬಹುದು.
ವಿದ್ಯಾರ್ಹತೆ: ಬಿ.ಇ /ಬಿ.ಟೆಕ್ /ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನದ ವಿವರ: ಡೆಪ್ಯುಟಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸುತ್ತಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು.ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಕಚೇರಿಯ ವಿಳಾಸ:
ಡೆಪ್ಯುಟಿ ಜನರಲ್ ಮ್ಯಾನೇಜರ್, ಮಿಲಿಟರ್ ಕಮ್ಯುನಿಕೇಶನ್ ಎಸ್ಬಿಯು, ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು-560013