ಬೆಳಗಾವಿಯಲ್ಲಿ ಭೂ ಕುಸಿತ

ಬೆಳಗಾವಿಯಲ್ಲಿ ಭೂ ಕುಸಿತ

ಬೆಳಗಾವಿ, ಆ.5 : ನಿರಂತರ ಮಳೆ ಸುರಿಯುತ್ತಿದ್ದು ಭಾರೀ ಪ್ರಮಾಣದ ನೀರು ಹರಿದು ಬಂದಿದ್ದರಿಂದ ವಿಮಾನ ನಿಲ್ದಾಣದ ಕಾಂಪೌಂಡ್ಗೆ ಹೊಂದಿಕೊಂಡು ಐದು ಅಡಿಯಷ್ಟು ಭೂಮಿ ಕುಸಿದಿದೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದ ಕಾಂಪೌಂಡ್ ಪಕ್ಕದಲ್ಲೇ ಭೂಮಿ ಕುಸಿತವಾಗಿದೆ. ಇಲ್ಲಿನ ಗ್ರಾಮಸ್ಥರಿಗೆಸಿಬ್ಬಂದಿ ಹಾಗೂ ಸಾಂಬ್ರಾ ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಬೆಳಗಾವಿ ತಾಲೂಕಿನಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮಳೆಗೆ ನಗರದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಂಜರ್ ಗಲ್ಲಿಯಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ನೀರು ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದಾರೆ. ಇತ್ತ ಖಡೇಬಜಾರ್ ನಲ್ಲಿ ಎರಡು ಮನೆಗಳು ಕುಸಿತವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos