ಬೆಳಗಾವಿ ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರು

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಚನ್ನಮ್ಮನ ಹೆಸರು

ಬೆಂಗಳೂರು, ಅ. 24 : ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ಚನ್ನಮ್ಮ ಹೆಸರಿಡುವುದು, ಚನ್ನಮ್ಮನ ಜನ್ಮ ಸ್ಥಳ, ಸಮಾಧಿ ಮತ್ತು ಕೋಟೆಯನ್ನು ರಾಷ್ಟ್ರೀಯ ಸ್ಮಾರಕಗಳೆಂದು ಘೋಷಿಸಲು ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಅಂಗವಾಗಿ ನಗರದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅವರು ಮಾತನಾಡಿದರು. ನಾಡಿನ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ದಿಟ್ಟ ರಾಣಿ ಕಿತ್ತೂರು ಚನ್ನಮ್ಮ. ಅವರ ಸಾಮರ್ಥ್ಯ, ಸಾಹಸ, ದಿಟ್ಟತನದ ಹೋರಾಟ ಅವಿಸ್ಮರಣೀಯ ಎಂದು ಮುಖ್ಯಮಂತ್ರಿ ಸ್ಮರಿಸಿದರು.
ದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಅಲ್ಲಿನ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಬೇರೆಲ್ಲಾ ಕೆಲಸಗಳಿಗಿಂತ ತುರ್ತಾಗಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕಿದೆ. ಇಂದು ಯಾವುದೇ ಹೊಸ ಘೋಷಣೆಯನ್ನು ಮಾಡುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಚನ್ನಮ್ಮಾಜಿಯವರ ಜಯಂತಿಗೆ ಗೌರವ ಕೊಡುವ ರೀತಿಯಲ್ಲಿ ಎಲ್ಲಾ ನೆರವು ನೀಡುತ್ತೇನೆ ಎಂಬ ಭರವಸೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos