ಬೆಳ್ತಂಗಡಿ: ಬಿಜೆಪಿ ಯುವ ಮುಖಂಡ ಕಾಂಗ್ರೆಸ್ ಸೇರ್ಪಡೆ

ಬೆಳ್ತಂಗಡಿ: ಬಿಜೆಪಿ ಯುವ ಮುಖಂಡ ಕಾಂಗ್ರೆಸ್ ಸೇರ್ಪಡೆ

ಬೆಳ್ತಂಗಡಿ, ಮಾ.30, ನ್ಯೂಸ್ ಎಕ್ಸ್ ಪ್ರೆಸ್: ಬಿಜೆಪಿ ಯುವ ಮುಖಂಡ, ಪಕ್ಷದ ತಾಲೂಕು ಸಮಿತಿಯ ಅಧ್ಯಕ್ಷ ರಂಜನ್ ಜಿ. ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಶುಕ್ರವಾರ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರನ್ನು ರಂಜನ್ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸೋಮವಾರ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದ್ದು, ಈ ಸಂದರ್ಭ ರಂಜನ್ ಅಧಿಕೃತವಾಗಿ ಕಾಂಗ್ರೆಸ್ ಪಾಳಯ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಮಾಜಿ ಸಚಿವ ಕೆ.ಗಂಗಾಧರ ಗೌಡರ ಪುತ್ರರಾಗಿರುವ ರಂಜನ್ ಗೌಡ 2013ರ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಅವಕಾಶ ನೀಡಿರಲಿಲ್ಲ. ರಂಜನ್ ಗೌಡ ಈ ಹಿಂದೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos