ಬೆಂಗಳೂರು, ಮಾ.30, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 31 ಅಭ್ಯರ್ಥಿಗಳು ಚುನಾವಣಾ ಸ್ಪರ್ಧಾ ಕಣದಲ್ಲಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳೂ ಆದ ಬೆಂಗಳೂರು ಉತ್ತರ ಲೋಕಸಭಾ ಚುನಾವಣಾಧಿಕಾರಿ ಬಿ. ಎಂ. ವಿಜಯ್ ಶಂಕರ್ ತಿಳಿಸಿದ್ದಾರೆ.
ನಗರದ ಕೆಂಪೇಗೌಡ ರಸ್ತೆಯ ಕಂದಾಯ ಭವನದದಲ್ಲಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಣ ಸಭಾಂಗಣದಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ಸ್ಪರ್ಧಿಗಳ ಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗದಿಂದ ನಿಯೋಜಿತರಾಗಿರುವ ಚುನಾವಣಾ ವೀಕ್ಷಕರಾದ ಟಿ ಎನ್ ವೆಂಕಟೇಶ್, ಪಿ ಸ್ ರೆಡ್ಡಿ ಹಾಗೂ ರೆಡ್ಡಿ ಶಂಕರ್ ಬಾಬು ಅವರನ್ನು ಚುನಾವಣಾ ಕಣದಲ್ಲಿರುವ ಹುರಿಯಾಳುಗಳಿಗೆ ಪರಿಚಯಿಸಿ ಮುಕ್ತ, ನಿಷ್ಪಕ್ಷಪಾತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಸಹಕರಿಸಲು ಮನವಿ ಮಾಡಿದರು.