ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆ ಅಖಾಡ ರಂಗೇರಿದೆ, ರಾಜ್ಯದಲ್ಲಿ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳ ನಾಯಕರು ಮತದಾರನ್ನು ಸೆಳೆಯಲು ಕಸರತ್ತು ಮಾಡುತ್ತಿದ್ದಾರೆ. ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತ ಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾರೆ. ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos