ಅತಿ ವೇಗವಾಗಿ ಬೆಳೆಯುತ್ತಿರುವ ನಗರ ಬೆಂಗಳೂರು

ಅತಿ ವೇಗವಾಗಿ ಬೆಳೆಯುತ್ತಿರುವ ನಗರ ಬೆಂಗಳೂರು

ಬೆಂಗಳೂರು, ಸೆ 12: G20 ಶೃಂಗಸಭೆ ಬಳಿಕ ಬೆಂಗಳೂರು ಪ್ರವಾಸದಲ್ಲಿರುವ ನೆದರ್ಲೆಂಡ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ರನ್ನು ಭೆಟಿ ಮಾಡಿ ಹಾಗೂ ದೇಶದ ಕಂಪನಿಗಳ ಪ್ರಮುಖರ ಜತೆ ಸಭೆ ನಡೆಸಿ ನಮ್ಮಲ್ಲಿ ಏರೋಸ್ಪೇಸ್, ರಕ್ಷಣೆ, ಸಂಚಾರ, ಸಂಶೋಧನೆ ಮತ್ತು ಅಭಿವೃದ್ಧಿ, ದತ್ತಾಂಶ ಕೇಂದ್ರ, ಮತ್ತು ಜವಳಿ ಕ್ಷೇತ್ರಗಳಿಗೆ ಪ್ರತ್ಯೇಕ ನೀತಿ ಇದ್ದು, ಪ್ರತಿ ಕ್ಷೇತ್ರದಲ್ಲೂ ಬಂಡವಾಳ ಆಕರ್ಷಣೆಗೆ ಸಹಾಯಕವಾಗಿವೆ ಎಂದು ಡಿಕೆಶಿ ಹೇಳಿದರು.

ಬಂಡವಾಳ ಹೂಡಿಕೆದಾರರ ಸ್ನೇಹಿ ನೀತಿಗಳಿಂದಾಗ ನಮ್ಮ ರಾಜ್ಯ 2022-23ನೇ ಸಾಲಿನಲ್ಲಿ 4.67 ಟ್ರಿಲಿಯನ್ ಬಂಡವಾಳವನ್ನು ಆಕರ್ಷಿಸಿದೆ. ಇಡೀ ವಿಶ್ವದಲ್ಲೇ 2,050 ಮೆ.ವ್ಯಾಟ್ ವಿದ್ಯುತ್ ಉತ್ಪಾದಿಸುವ ಸೋಲಾರ್ ಪಾರ್ಕ್ ಅನ್ನು ಕರ್ನಾಟಕ ಹೊಂದಿದೆ. ದೇಶದಲ್ಲಿ ಮೊದಲು ಇವಿ ನೀತಿ ಪ್ರಕಟಿಸಿದ ರಾಜ್ಯ ಎಂದರೆ ಅದು ಕರ್ನಾಟಕ. ಬೆಂಗಳೂರು ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಮೆಟ್ರೋಪಾಲಿಟನ್ ನಗರವಾಗಿದ್ದು, ಪ್ರೈಮ್ ಗ್ಲೋಬಲ್ ಸಿಟೀಸ್ ಇಂಡೆಕ್ಸ ನಲ್ಲಿ 16ನೇ ಸ್ಥಾನ ಪಡೆದಿದೆ.

ಜೊತೆಗೆ ಬೆಂಗಳೂರು, ಅಮೆರಿಕದ ಕಂಪನಿಗಳಿಗೆ ನೆಚ್ಚಿನ ತಾಣವಾಗಿದೆ. ಕಾಸ್ಮೋಪಾಲಿಟನ್ ಸಂಸ್ಕೃತಿ, ಪ್ರತಿಭಾವಂತ ಸಂಪನ್ಮೂಲ, ಮಾನವ ಸಂಪನ್ಮೂಲ ಬೆಂಗಳೂರಿನ ಶಕ್ತಿಯಾಗಿವೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ. ಇನ್ನು ಅನೇಕ ಸುಂದರ ಹಾಗೂ ಪ್ರಬಲ ನಗರಗಳಿವೆ.
ಕೈಗಾರಿಕೆಗಳು ಇತರ ನಗರಗಳತ್ತವೂ ಸಾಗುತ್ತಿದೆ

ಕೈಗಾರಿಕೆಗಳು, ಬೆಂಗಳೂರಿನ ಹೊರತಾಗಿ ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ, ತುಮಕೂರು, ಬೆಳಗಾವಿ, ಕಲ್ಬುರ್ಗಿ ನಗರಗಳಲ್ಲಿ ಆರಂಭಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ.

ನಿಮ್ಮ ರಾಷ್ಟ್ರದ ಜತೆಗೆ ಉತ್ತಮ ಬಾಂಧವ್ಯ ಬೆಸೆದು ಸುಸ್ಥಿರ ಅಭಿವೃದ್ಧಿ ಹಾಗೂ ಪ್ರಗತಿ ಸಾಧಿಸಲು ನಾವು ಇಚ್ಛಿಸುತ್ತೇವೆ. ನಿಮ್ಮ ಭವಿಷ್ಯದ ಹೆಜ್ಜೆಯಲ್ಲಿ ನಾವು ಹೇಗೆ ನಿಮಗೆ ಸಹಕಾರ ನೀಡಬೇಕು ಎಂದು ತಿಳಿಯಲು ನಾವು ಉತ್ಸುಕರಾಗಿದ್ದೇವೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos