ವೀಳ್ಯದೆಲೆಯ ಹಲವಾರು ಉಪಯೋಗಗಳು

ವೀಳ್ಯದೆಲೆಯ ಹಲವಾರು ಉಪಯೋಗಗಳು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಕಷ್ಟಕರವಾಗಿದೆ, ನಾವು ದಿನನಿತ್ಯ ಬಳಸುವಂತಹ ಪದಾರ್ಥಗಳಲ್ಲಿ ನಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ವೀಳ್ಯದೆಲೆ ಎಲ್ಲಾ ಶುಭಾ ಕಾರ್ಯಕ್ರಮದಲ್ಲಿ ಬಳಸುತ್ತಾರೆ, ಇದನ್ನು ನಾವು ಸರಿಯಾಗಿ ಉಪಯೋಗಿಸುವುದರಿಂದ ನಮ್ಮ ಅರೋಗ್ಯದಲ್ಲಿ ಸುದಾರಣೆ ಕಾಣಬಹುದು.

ವೀಳ್ಯದೆಲೆ ಎಂದರೆ ಅದರ ಬಗ್ಗೆ ಗ್ರಾಮಾಂತರ ಪ್ರದೇಶದ ಜನರಿಗೆ ಹೆಚ್ಚಿಗೆ ವಿವರಿಸಬೇಕೆಂದಿಲ್ಲ. ಭಾರತೀಯರು ಆಯುರ್ವೇದದಲ್ಲಿ ವಿವಿಧ ರೀತಿಯ ಚಿಕಿತ್ಸೆಗೆ ಇದನ್ನು ಬಳಸಿಕೊಂಡು ಬಂದಿದ್ದಾರೆಕ್ಯಾಲ್ಸಿಯಂ ಅಂಶ ಹೆಚ್ಚಿರುವ ವೀಳ್ಯದೆಲೆ ತಿನ್ನುವುದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ವೀಳ್ಯದೆಲೆ ಜೀರ್ಣಶಕ್ತಿ ಹೆಚ್ಚಿಸಿ, ಧ್ವನಿ ಸರಿಪಡಿಸಿ, ಗ್ಯಾಸ್ಟ್ರಿಕ್ ಟ್ರಬಲ್ ನ್ನು ಬಹುಮಟ್ಟಿಗೆ ಗುಣಪಡಿಸುತ್ತದೆ. ಮಕ್ಕಳಲ್ಲಿನ ಕೆಮ್ಮು ಮತ್ತು ಅಜೀರ್ಣಕ್ಕೆ ಈ ಎಲೆಯ ರಸ ಉಪಯೋಗ. ಸಣ್ಣ ಮಕ್ಕಳಲ್ಲಿ ಉಸಿರಾಟದ ತೊಂದರೆಯಾದಾಗ ಎಣ್ಣೆ ಸವರಿ, ಬಾಣಲೆಯಲ್ಲಿ ಬೆಚ್ಚಗೆ ಮಾಡಿದ ವೀಳ್ಯದೆಲೆಯನ್ನು ಎದೆಯ ಮೇಲಿಡುವುದು ಪ್ರಯೋಜನಕಾರಿ.

ಪುಟ್ಟ ಮಕ್ಕಳಲ್ಲಿ ಹೊಟ್ಟೆ ಉಬ್ಬರ ಉಂಟಾಗಿ ಅಳುತ್ತಿದ್ದರೆ, ವೀಳ್ಯದೆಲೆಗೆ ಹರಳೆಣ್ಣೆ ಸವರಿ ಬೆಚ್ಚಗೆ ಮಾಡಿ ಅದರಿಂದ ಮಗುವಿನ ಹೊಟ್ಟೆಗೆ ಶಾಖ ನೀಡಿದರೆ ಹೊಟ್ಟೆನೋವು, ಹೊಟ್ಟೆ ಉಬ್ಬರ ಗುಣವಾಗುತ್ತದೆ.

ಮಕ್ಕಳಲ್ಲಿ ನೆಗಡಿ, ಕೆಮ್ಮು, ಕಫ‌ ಉಂಟಾದಾಗ ವೀಳ್ಯದೆಲೆಯ ರಸ, ತುಳಸೀರಸ, ದೊಡ್ಡಪತ್ರೆಯ ರಸ ಬೆರೆಸಿ, ಜೇನು ತುಪ್ಪ ಸೇರಿಸಿ ನೀಡಿದರೆ ಶೀಘ್ರ ಗುಣವಾಗುತ್ತದೆ.

ಅಸ್ತಮಾ, ಕೆಮ್ಮು, ಕಫ‌ದಿಂದ ಬಳಲುವವರು, ವೀಳ್ಯದೆಲೆಯ ರಸ, ಬಿಳಿ ಈರುಳ್ಳಿಯ ರಸ ಹಾಗೂಜೇನುತುಪ್ಪ ಬೆರೆಸಿ, ಅದರಲ್ಲಿ ಶುದ್ಧ ಇಂಗನ್ನು ಕದಡಿ ದಿನಕ್ಕೆ 3-4 ಬಾರಿ ಸೇವಿಸಿದರೆ ತುಂಬಾ ಪರಿಣಾಮಕಾರಿ.

ಫ್ರೆಶ್ ನ್ಯೂಸ್

Latest Posts

Featured Videos