ರಾಜಸ್ಥಾನದ ನೂತನ ಸಿಎಂ ಆಗಿ ಭಜನ್ ಲಾಲ್ ಶರ್ಮಾ ಪ್ರಮಾಣವಚನ ಸ್ವೀಕಾರ!

ರಾಜಸ್ಥಾನದ ನೂತನ ಸಿಎಂ ಆಗಿ ಭಜನ್ ಲಾಲ್ ಶರ್ಮಾ ಪ್ರಮಾಣವಚನ ಸ್ವೀಕಾರ!

ಬೆಂಗಳೂರು: ತಮ್ಮ ಹುಟ್ಟುಹಬ್ಬದ ದಿನದಂದೇ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್‌ರಾಜ್‌ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.ರಾಜಸ್ಥಾನ ವಿಧಾನಸಭೆ ಗೆದ್ದ ಬಿಜೆಪಿ ಇದೀಗ ಅಧಿಕೃತವಾಗಿ ಸರ್ಕಾರ ರಚಿಸಿದೆ. ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಶರ್ಮಾ ಜೊತೆಗೆ ಉಪಮುಖ್ಯಮಂತ್ರಿಗಳಾಗಿದೆ. ದಿಯಾ ಕುಮಾರಿ ಹಾಗೂ ಪ್ರೇಮ್ ಚಂದ್ರ ಬೈರ್ವಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ,  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಬಿವಿಪಿ ಮೂಲದ ಹಾಗೂ ಆರೆಸ್ಸೆಸ್‌ ಬೆಂಬಲಿತ ಭಜನ್‌ಲಾಲ್‌ ಶರ್ಮಾ ಅವರನ್ನು ಸರ್ವಾನುಮತದಿಂದ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು. 1992ರಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಹಾಗೂ ಆರ್‌ಎಸ್ಎಸ್‌ ಕಾರ್ಯಕರ್ತ ಭಜನ್‌ ಲಾಲ್‌ ಶರ್ಮಾ(54) ಇಂದು ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos