ಭಾರತೀಯ ಸೇನೆಯಿಂದ 2 ಉಗ್ರರ ಹತ್ಯೆ

ಭಾರತೀಯ ಸೇನೆಯಿಂದ 2 ಉಗ್ರರ ಹತ್ಯೆ

ಶ್ರೀನಗರ, ಮೇ. 30, ನ್ಯೂಸ್ ಎಕ್ಸ್ ಪ್ರೆಸ್: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೋಪೋರ್ ಎಂಬಲ್ಲಿ ಇಂದು ಬೆಳಗ್ಗೆಯಿಂದಲೂ ಗುಂಡಿನ ಚಕಮಕಿ ನಡೆಯುತ್ತಿತ್ತು. ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ದಾಳಿಯಲ್ಲಿ 2 ಉಗ್ರರನ್ನು ಸದೆಬಡಿಯಲಾಗಿದೆ.

ಸೋಪೋರ್ ನ ಡಾಂಗರ್ ಪೋರಾ ಎಂಬಲ್ಲಿ ಭಯೋತ್ಪಾದಕರು ಅಡಗಿಕುಳಿತಿದ್ದಾರೆ ಎಂಬ ಖಚಿತ ಮಾಹಿತಿಯ ಮೇಲೆ ಭಾರತೀಯ ಯೋಧರು ದಾಳಿ ನಡೆಸಿದ್ದರು. ಇದೀಗ 2 ಉಗ್ರರನ್ನು ಹತ್ಯೆಗೈಯ್ಯಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಮೇ 22 ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲಪೊರ ಎಂಬಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿತ್ತು.

ಭಾರತೀಯ ಸೇನೆಯೆ 34 ಆರ್ ಆರ್ ಮತ್ತು ಎಸ್ ಒಗಿ ತಂಡಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಹೊಡೆದುರುಳಿಸಲಾಗಿದೆ.

ಹತ್ಯೆಗೀಡಾದ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರೆಂದು ಮೂಲಗಳು ತಿಳಿಸಿದ್ದವು.

 

ಫ್ರೆಶ್ ನ್ಯೂಸ್

Latest Posts

Featured Videos