ಭೂ ಸ್ವಾಧೀನ ಪ್ರಕ್ರಿಯೆ ತ್ವರಿತ

ಭೂ ಸ್ವಾಧೀನ ಪ್ರಕ್ರಿಯೆ ತ್ವರಿತ

ಕೋಲಾರ, ಜು. 26 : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನ ಹೊಳೆ ಯೋಜನೆಯು ಕುಡಿಯುವ ನೀರಿನ ಯೋಜನೆ ಆಗಿರುವ ಕಾರಣ ಭೂ ಸ್ವಾಧೀನ ಕಾಯ್ದೆ ಕಲಂ 23 ಮತ್ತು 24ನ್ನು ತಿದ್ದುಪಡಿ ಮಾಡಿ ಜಿಲ್ಲಾಧಿಕಾರಿಗಳು, ಭೂ ಒಡೆಯರು ಮತ್ತು ಸರ್ಕಾರದ ಮಧ್ಯೆ ನೇರ ಮಾತುಕತೆ ನಡೆಸಿ ಸಮಾಧಾನಕರವಾಗಿರುವ ಬೆಲೆಯನ್ನು ನಿಗಧಿ ಪಡಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಇತ್ಯರ್ಥಗೊಳಿಸಲು ರಾಜ್ಯ ವಿಧಾನಸಭೆಯು ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತ್ತು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ರೂಪಿಸಿದ ಎತ್ತಿನ ಹೊಳೆ ಯೋಜನೆಯ ಭೂ ಸ್ವಾಧೀನ ಕಾಯ್ದೆಗೆ ಮಾಡಲಾಗಿರುವ ತಿದ್ದುಪಡಿಗೆ ರಾಜ್ಯಪಾಲರ ಅಂಗೀಕಾರ ದೊರೆತ ನಂತರ ಇದೀಗ ರಾಷ್ಟ್ರಪತಿಗಳ ಅಂಕಿತವೂ ದೊರೆತಿದೆ.

ಫ್ರೆಶ್ ನ್ಯೂಸ್

Latest Posts

Featured Videos