ಡಿಕೆಶಿಗೆ ಬಿಗ್‌ ರಿಲಿಫ್..!

ಡಿಕೆಶಿಗೆ ಬಿಗ್‌ ರಿಲಿಫ್..!

ಬೆಂಗಳೂರು: ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದಂತ ಅನುಮತಿ ನಿರ್ಧಾರ ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಆ ಬಳಿಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ವಾದ-ಪ್ರತಿವಾದ ನಡೆದು, ಅಂತಿಮವಾಗಿ ಪಂಜಾಬ್ ಸರ್ಕಾರದ ಕೇಸ್ ಉಲ್ಲೇಖಿಸಿ, ಸಿಬಿಐ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ವಾಪಾಸ್ ಪಡೆಯಲು ಅನುಮತಿಸಿತು. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.

ಇಂದು ಸರ್ಕಾರದ ಅನುಮತಿ ನಿರ್ಧಾರ ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸಿಜೆ ಪಿ.ಬಿ ವರ್ಲೆ ಮತ್ತು ನ್ಯಾಯಮೂರ್ತಿ ಕೃಷ್ಣದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ಆರಂಭಿಸಿತು.

ಡಿಕೆಶಿ ಪರ ವಕೀಲರು ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುತ್ತಿದ್ದಂತೇ, ಕೆಲ ಕಾಲ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಯಿತು. ಆ ಬಳಿಕ ತನ್ನ ತೀರ್ಪು ಪ್ರಕಟಿಸಿದಂತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಸಿಬಿಐ, ಯತ್ನಾಳ್ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ. ಈವರೆಗೂ ಸರ್ಕಾರದ ಕ್ರಮ ಯಾರು ಪ್ರಶ್ನಿಸಿ ಅರ್ಜಿ ಸಲ್ಲಿಸಿಲ್ಲ. ಕಾಜಿ ಲೆಂಡಪ್ ದೋರ್ಜ್ ಪ್ರಕರಣದ್ಲಲಿ ಸರ್ಕಾರದ ಕ್ರಮ ಪ್ರಶ್ನಿಸಲಾಗಿತ್ತು ಎಂಬುದಾಗಿ ಹೇಳುವ ಮೂಲಕ, ಡಿಕೆ ಶಿವಕುಮಾರ್ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿ ವಾಪಾಸ್ ಗೆ ಅನುಮತಿಸಿತು.

ಫ್ರೆಶ್ ನ್ಯೂಸ್

Latest Posts

Featured Videos