ಮುಂಬೈ ಇಂಡಿಯನ್ಸ್​ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ಗೆ ಭರ್ಜರಿ ಜಯ

ಮುಂಬೈ ಇಂಡಿಯನ್ಸ್​ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ ಗೆ ಭರ್ಜರಿ ಜಯ

ಬೆಂಗಳೂರು: ವುಮೆನ್ಸ್ ಪ್ರೀಮಿಯರ್ ಲೀಗ್​ನ 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನಾಯಕಿ ಮೆಗ್ ಲ್ಯಾನಿಂಗ್ ಉತ್ತಮ ಆರಂಭ ಒದಗಿಸಿದ್ದರು.

ಶಫಾಲಿ ವರ್ಮಾ (28) ಜೊತೆ ಇನಿಂಗ್ಸ್ ಆರಂಭಿಸಿದ ಲ್ಯಾನಿಂಗ್​ 38 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 53 ರನ್ ಬಾರಿಸಿದರು. 33 ಎಸೆತಗಳನ್ನು ಎದುರಿಸಿದ ಜೆಮಿಮಾ 3 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 69 ರನ್ ಬಾರಿಸಿದರು. ಈ ಭರ್ಜರಿ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 192 ರನ್ ಕಲೆಹಾಕಿತು.

193 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರ್ತಿ ಮ್ಯಾಥ್ಯೂ ಹೇಲಿ 29 ರನ್ ಬಾರಿಸಿದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಇನ್ನು ಕೆಲ ಕ್ರಮಾಂಕದಲ್ಲಿ ಅಮ್ಜೋತ್ ಕೌರ್ 42 ರನ್ ಬಾರಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 8 ವಿಕೆಟ್ ಕಳೆದುಕೊಂಡು 163 ರನ್​ಗಳಿಸಿ ಮುಂಬೈ ಇಂಡಿಯನ್ಸ್​ 29 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಫ್ರೆಶ್ ನ್ಯೂಸ್

Latest Posts

Featured Videos