13ರಂದು ಶಾ ನೇತೃತ್ವದಲ್ಲಿ ಬಿಜೆಪಿ ಸಭೆ

13ರಂದು ಶಾ ನೇತೃತ್ವದಲ್ಲಿ ಬಿಜೆಪಿ ಸಭೆ

ಬೆಂಗಳೂರು, ಜೂನ್.11, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯಾಧ್ಯಕ್ಷರ ಬದಲಾವಣೆಯ ಕುರಿತಾಗಿ ಇದೇ ಜೂನ್ 13ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಮಾತು ಕೇಳಿ ಬರುತ್ತಿದೆ. ರಾಜ್ಯಾಧ್ಯಕರ ಬದಲಾವಣೆಯ ಕೂಗು ಕಮಲ ಅಂಗಳದಲ್ಲಿ ಬಹುದಿನಗಳಿಂದ ಕೇಳಿ ಬರುತ್ತಿದೆ. ಇತ್ತ ಹೈಕಮಾಂಡ್ ನಿಲುವಿಗೆ ಬದ್ಧ ಎಂದು ಯಡಿಯೂರಪ್ಪನವರು ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳೂ, ಪದಾಧಿಕಾರಿಗಳಿಗೂ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos