ಬಿಲ್ ಗೇಟ್ಸ್ ನಂಬರ್ 1

ಬಿಲ್ ಗೇಟ್ಸ್ ನಂಬರ್ 1

ಸೀಟಲ್ , ಅ. 25: ವಿಶ್ವದ ಅತ್ಯಂತ ಆಗರ್ಭ ಶ್ರೀಮಂತ ಬಿರುದನ್ನು ಅಮೆಜಾನ್ ಸ್ಥಾಪಕ ಮತ್ತು ಸಿಇಒ ಜೆಫ್ ಬೆಜೋಸ್ ಕಳೆದುಕೊಂಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ ಕಳೆದ ತ್ರೈಮಾಸಿಕದಲ್ಲಿ ಬೆಜೋಸ್ ಸುಮಾರು 7 ಶತಕೋಟಿ ಡಾಲರ್ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿದ್ದಾರೆ.

ಮೈಕ್ರೊಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಸಂಪತ್ತಿನ ಮೌಲ್ಯ ಈಗ 105.7 ಶತಕೋಟಿ ಡಾಲರ್ ಆಗಿದೆ. ಸತತ 24 ವರ್ಷಗಳಿಂದ ಕಳೆದ ವರ್ಷದವರೆಗೂ ಬಿಲ್ ಗೇಟ್ಸ್ ಅವರೇ ಜಗತ್ತಿನ ಶ್ರೀಮಂತ ವ್ಯಕ್ತಿಯಾಗಿದ್ದರು. ಕಳೆದ ವರ್ಷ ಬಿಜೋಸ್ ಅವರನ್ನು ಹಿಂದಿಕ್ಕಿ ದಾಖಲೆ ನಿರ್ಮಿಸಿದ್ದರು. ಆಗ ಅವರ ಒಟ್ಟಾರೆ ಸಂಪತ್ತಿನ ಮೌಲ್ಯ 160 ಶತಕೋಟಿ ಡಾಲರ್ ಆಗಿತ್ತು.

 

 

ಫ್ರೆಶ್ ನ್ಯೂಸ್

Latest Posts

Featured Videos