ಬಿಸಿಲು ನಗರಿಯಲ್ಲಿ ಸೂರ್ಯನ ದರ್ಶನ ಇಲ್ಲ

ಬಿಸಿಲು ನಗರಿಯಲ್ಲಿ ಸೂರ್ಯನ ದರ್ಶನ ಇಲ್ಲ

ಕಲಬುರಗಿ, ಆ.03 : ಕಳೆದ ನಾಲ್ಕು ದಿನದಿಂದ ಕಲಬುರಗಿ ಮಹಾನಗರ ಹಾಗೂ ಜಿಲ್ಲೆಯಾದ್ಯಂತ ದಟ್ಟ ಮೋಡಗಳು ಕವಿದುಕೊಂಡಿರುವ ಕಪ್ಪನೆಯ ಆಗಸ, ಜಿಟಿಜಿಟಿ ಸುರಿಯುವ ಮಳೆಯಿಂದಾಗಿ ಸೂರ್ಯ ನಗರಿ ತೊಯ್ದು ತೊಪ್ಪೆಯಾಗುತ್ತಿದೆ. ಬಿಸಿಲೂರು ಮಂಜಿನ ನಗರಿಯಾಗಿದೆಯಲ್ಲದೆ ಮಳೆಯ ಊರಾಗಿ ಎಲ್ಲರಿಗೂ ಆಪ್ಯಾಯಮಾನವಾಗಿದೆ.
ಕಲಬುರಗಿ ನಗರ ಹಾಗೂ ಜಿಲ್ಲೆಯ ಇಲ್ಲಿನ ಜನರೇ ಹೇಳುವಂತೆ ಮಳೆ ಬರಲಿ ಬಿಡ್ರಿ, ಕಳೆದ 3 ವರ್ಷದಿಂದ ಇಂತಹ ಮಳೆ ವಾತಾವರಣ ಕಂಡೇ ಇರಲಿಲ್ಲ, ಈಗಲಾದರೂ ನಾಲ್ಕು ದಿನ ಮಳೆ ಸುರಿಯುತ್ತಿದೆ, ಮಳೆಗಾಲ ಅಂತಾದರೂ ನಮಗೆಲ್ಲರಿಗೂ ಅನಿಸಿಕೆಯಾಗುತ್ತಿದೆಯಲ್ಲ ಎಂದು ಮಳೆಯ ಆಗಮನವನ್ನು ಹರುಷದಿಂದ ಸ್ವಾಗತಿಸಿ ಸಂಭ್ರಮಿಸುತ್ತಿದ್ದಾರೆ.
ಮಳೆಯ ಕೊರತೆ ಕಾಡಿದ್ದಾಗ ಚಿಂತೆಯಲ್ಲಿದ್ದ ಜಿಲ್ಲೆಯ ರೈತರು ಈ ಬಾರಿ ಶ್ರಾವಣ ಆರಂಭದೊಂದಿಗೇ ಮಳೆಯ ಶ್ರಾವಣಕ್ಕೆ ಹುರುಪಿನಿಂದ ಸ್ವಾಗತಿಸುತ್ತಿದ್ದಾರೆ. ಶ್ರಾವಣ ಈ ಬಾರಿ ಮಳೆಯೊಂದಿಗೆ ಚಿತ್ತಾರ ಮೂಡಿಸಿತಲ್ಲ… ಎಂದು ದೇವರಿಗೆ ಕೋಟಿ ನಮನ ಸಲ್ಲಿಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos