ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್

ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್

ನವದೆಹಲಿ, ಮಾ. 12, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿರುವ ಬೆನ್ನಲೇ ಕಣಕ್ಕಿಳಿಯಲಿರುವ  ಹೆಸರು ಮೇಲಿಂದ ಮೇಲೆ ತೇಲಿ ಬರುತ್ತಲೇ ಇವೆ.

ಈ ಸಾಲಿನಲ್ಲಿ ಸೆಲೆಬ್ರಿಟಿಗಳೂ ಸೇರಿದ್ದು, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನವದೆಹಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಬಿಜೆಪಿಯ ಮೀನಾಕ್ಷಿ ಲೇಖಿ ನವದೆಹಲಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು, ಇದೇ ಕ್ಷೇತ್ರದಿಂದ ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್(37) ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ಗಂಭೀರ್ ಇದೇ ಕ್ಷೇತ್ರದ ರಾಜಿಂದರ್ ನಗರದ ನಿವಾಸಿಯಾಗಿದ್ದಾರೆ.

545 ಲೋಕಸಭಾ ಕ್ಷೇತ್ರಗಳ ಪೈಕಿ ದೆಹಲಿ 7 ಕ್ಷೇತ್ರಗಳನ್ನು ಹೊಂದಿದೆ. ರಾಷ್ಟ್ರ ರಾಜಧಾನಿಯಲ್ಲಿ ಮೀನಾಕ್ಷಿ ಲೇಖಿ ಅವರಿಗೆ ಮತ್ತೊಂದು ಕ್ಷೇತ್ರವನ್ನು ಬಿಟ್ಟು ಕೊಡಲಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos