ಅಮಿತ್ ಶಾ ಒಬ್ಬ ಗೂಂಡಾ ರೌಡಿ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಅಮಿತ್ ಶಾ ಒಬ್ಬ ಗೂಂಡಾ ರೌಡಿ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಅಮಿತ್ ಶಾ ಒಬ್ಬ ಗೂಂಡಾ ರೌಡಿ. ಅವರ ಮೇಲೆ ಕೊಲೆ ಆರೋಪವಿತ್ತು. ಅಂಥವರನ್ನ ಪಕ್ಕದಲ್ಲಿ ಇಟ್ಟುಕೊಂಡು ಮೋದಿ ರಾಜಕೀಯ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯರ ಪುತ್ರ, ಮಾಜಿ ಶಾಸಕ ಯತೀಂದ್ರ ಮಾಡಿದ ಗಂಭೀರ ಆರೋಪ ಮಾಡಿದ್ದರು. ಸದ್ಯ ಇದೇ ಮಾತಿಗೆ ಬಿಜೆಪಿ ನಾಯಕರನ್ನು ಕೆರಳಿಸಿದ್ದು, ಯತೀಂದ್ರ ವಿರುದ್ಧ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಮತ್ತು  ನೀತಿ ಸಂಹಿತೆ ಇದ್ದರೂ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ರಾಜೀವ್ ಗಾಂಧಿ ಪ್ರತಿಮೆ ಮುಚ್ಚದ ಹಿನ್ನೆಲೆ ಚುನಾವಣಾ ಆಯೋಗಕ್ಕೆ ಬಿಜೆಪಿಯ ಎಂಎಲ್​ಸಿಗಳಾದ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ದೂರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪರಿಷತ್​ನ ಬಿಜೆಪಿ ಸದಸ್ಯ ಎನ್.ರವಿಕುಮಾರ್​, ಅಮಿತ್ ಶಾ ವೈಯಕ್ತಿಕ ವಿಚಾರದ ಬಗ್ಗೆ ಯತೀಂದ್ರ ಹೇಳಿಕೆ ನೀಡಿದ್ದಾರೆ. ಕ್ರಮಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಡಾ.ಯತೀಂದ್ರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಯತೀಂದ್ರ ಸಿದ್ದರಾಮಯ್ಯಗೆ ಪ್ರಬುದ್ಧತೆ ಇಲ್ಲ ಅಂತಾ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಅಶ್ವತ್ಥ್ ನಾರಾಯಣ ಅಂತೂ ಕೂಡಲೇ ಕ್ಷಮೆ ಯಾಚಿಸಬೇಕು ಅಂತಾ ಆಗ್ರಹಿಸಿದ್ದರು. ಕೀಳು ಮಟ್ಟದ ಹೇಳಿಕೆ ಸರಿಯಲ್ಲ, ಅವರು ಡಾಕ್ಟರ್ ಅಂದ್ರು. ಮಾಜಿ ಸಚಿವ ಸಿ.ಟಿ.ರವಿ ಅಂತೂ ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು‌ ಹೀಗೆ ಮಾತನಾಡೋದು ಅಂತಾ ಕೌಂಟರ್ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos