ಬಿಜೆಪಿಗೆ ಸೇರ್ಪಡೆಗೊಂಡ ಸನ್ನಿ ಡಿಯೋಲ್

ಬಿಜೆಪಿಗೆ ಸೇರ್ಪಡೆಗೊಂಡ ಸನ್ನಿ ಡಿಯೋಲ್

ನವದೆಹಲಿ, ಏ. 23, ನ್ಯೂಸ್ ಎಕ್ಸ್ ಪ್ರೆಸ್: ಸ್ಟಾರ್ ನಟ ಧರ್ಮೇಂದ್ರ ಅವರ ಮಗ, ನಟ ಸನ್ನಿ ಡಿಯೋಲ್ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ(ಬೆಜೆಪಿ)ವನ್ನು ಸೇರಿಕೊಂಡಿದ್ದಾರೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ಬಿಜೆಪಿ ಸದಸ್ಯತ್ವ ಪಡೆದುಕೊಂಡರು.

ಸನ್ನಿ ಡಿಯೋಲ್ ಅವರು ಗುರ್ ದಾಸ್ಪುರ್ ಅಥವಾ ಅಮೃತಸರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳು ಕಂಡು ಬಂದಿವೆ. ಆದರೆ, ಈ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಬಿಜೆಪಿ ಮೂಲಗಳು ಹೇಳಿವೆ.

ಫ್ರೆಶ್ ನ್ಯೂಸ್

Latest Posts

Featured Videos