ಬೆಂಗಳೂರು: ವಾಲ್ಮೀಕಿ ಹಗಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಮಾಜಿ ಸಚಿವ ಬಿ ನಾಗೇಂದ್ರ ಅವರು ಇಂದು ಜಾಮೀನು ಮೇಲೆ ಹೊರ ಬಂದಿದ್ದಾರೆ. ಇನ್ನು ಜೈಲಿನಿಂದ ಹೊರ ಬರುತ್ತಿದ್ದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಜಮೀರ್ ಅಹ್ಮದ್ ಖಾನರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿ ನಾಗೇಂದ್ರ ಅವರು, ಕಳೆದ 3 ತಿಂಗಳಿದ ದುಷ್ಟ ರಾಜಕೀಯ ಮಾಡಿಕೊಂಡು ಬಿಜೆಪಿಯವರು ಬರ್ತಾ ಇದ್ದಾರೆ. ಬಿಜೆಪಿ ಇಡಿಯನ್ನ ಕೈ ಗೊಂಬೆ ಮಾಡಿಕೊಂಡಿದ್ದಾರೆ. ಎಲ್ಲಿ ಬಿಜೇಪಿಯೇತರ ಸರ್ಕಾರ ಇರುತ್ತದೋ, ಅಲ್ಲಿ ಸರ್ಕಾರವನ್ನ ತೆಗೆಯುವ ಪ್ರಯತ್ನ ಮಾಡಿದ್ತಿದ್ದಾರೆ. ಮೂರು ತಿಂಗಳಿಂದ ಜೈಲಿನಲ್ಲಿ ಇದ್ದೆ. ಇವತ್ತು ನ್ಯಾಯಾಧೀಶರು ಬಿಡುಗಡೆ ಮಾಡಿದ್ದಾರೆ. ಇವತ್ತು ಬಿಜೆಪಿ 66 ಜನ ಶಾಸಕರಿದ್ದಾರೆ. ಮುಂದೆ ಅದು ಇನ್ನು ಕಡಿಮೆ ಆಗುತ್ತದೆ ಎಂದರು.
ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಕೇಸನ್ನು ಎಸ್ ಐಟಿ ತನಿಖೆಗೆ ಕೊಡಲಾಗಿತ್ತು. ಎಲ್ಲಾ ಹಣವನ್ನ ಎಸ್ ಐಟಿ ರಿಕವರಿ ಮಾಡಿದೆ. ಇನ್ನು 3.80 ಲಕ್ಷ ರಿಕವರಿ ಆಗಬೇಕಿದೆ. ಇಡಿಯವರು ಚಾರ್ಜ್ ಶೀಟ್ ಹಾಕಿದ್ದಾರೆ. ಟೈಗರ್ ಈಸ್ ಬ್ಯಾಕ್, ಅವರ ನೇತೃತ್ವದಲ್ಲೆ ಚುನಾವಣೆಯಾಗುತ್ತದೆ ಎಂದು ಹೇಳಿದರು.