ಚಿತ್ರದುರ್ಗ, ಮಾ.21, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ರೂ, ಇನ್ನೂ ಬಿಡುಗಡೆಯಾಗಿಲ್ಲ. ಈ ಮಧ್ಯೆ ಭೋವಿ ಸಮುದಾಯಕ್ಕೆ ಟಿಕೆಟ್ ನೀಡದಿದ್ರೆ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಬಿಜೆಪಿಯ ಇಬ್ಬರು ಶಾಸಕರು ಎಚ್ಚರಿಕೆ ನೀಡಿದ್ದಾರೆನ್ನಲಾಗಿದೆ.
ಬೆಂಗಳೂರು, ಮಾ.21, ನ್ಯೂಸ್ ಎಕ್ಸ್ ಪ್ರೆಸ್:
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಭೋವಿ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡದಿದ್ರೆ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಜಿಲ್ಲೆಯ ಶಾಸಕರಾದ ಎಂ.ಚಂದ್ರಪ್ಪ ಮತ್ತು ಗೂಳಿಹಟ್ಟಿ ಶೇಖರ್ ಖಡಕ್ ಸಂದೇಶ ರವಾನಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಹೀಗಾಗಿ ಇಲ್ಲಿ ಭೋವಿ ಸಮುದಾಯದ ಮುಖಂಡ ಆನೇಕಲ್ ನಾರಾಯಣಸ್ವಾಮಿ ಹೆಸರು ಕೇಳಿಬರ್ತಿದೆ. ಆದ್ರೆ ತಮ್ಮ ಸಮುದಾಯದಲ್ಲಿ ಯಾರಿಗೆ ಟಿಕೆಟ್ ಕೊಟ್ರೂ ತಮಗೆ ಒಪ್ಪಿಗೆ ಇದೆ ಅಂತಾ ಶಾಸಕರು ತಿಳಿಸಿದ್ದಾರೆ.
ಸ್ಥಳೀಯ ಶಾಸಕರು, ಮುಖಂಡರ ಅಭಿಪ್ರಾಯ ಕೇಳದೆ ಟಿಕೆಟ್ ಫೈನಲ್ ಮಾಡಲಾಗಿದೆ ಎಂಬ ಕಾರಣಕ್ಕೆ ಈ ಇಬ್ಬರು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗ್ತಿದೆ.