ಹೆಗ್ಡೆ, ಇಬ್ಬರು ಬಿಜೆಪಿ ಮಾಜಿ ಶಾಸಕರು ಕೈಗೆ ಸೇರ್ಪಡೆ

ಹೆಗ್ಡೆ, ಇಬ್ಬರು ಬಿಜೆಪಿ ಮಾಜಿ ಶಾಸಕರು ಕೈಗೆ ಸೇರ್ಪಡೆ

ಬೆಂಗಳೂರು: ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ ಮತ್ತು ಎಂಪಿ ಕುಮಾರಸ್ವಾಮಿ ಅವರು ನಿನ್ನೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಮಾಜಿ ಶಾಸಕ, ಸಂಸದ ಮತ್ತು ಸಚಿವ ಜಯಪ್ರಕಾಶ್ ಹೆಗ್ಡೆ ಅವರು ಫೆಬ್ರವರಿ 29 ರಂದು “ಜಾತಿ ಗಣತಿ” ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.

ಜಯಪ್ರಕಾಶ್ ಹೆಗ್ಡೆ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ಇನ್ನು ಬಿಜೆಪಿಯ ಇಬ್ಬರು ಮಾಜಿ ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ ಮತ್ತು ಮೂರು ಬಾರಿ ಮೂಡಿಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಎಂಪಿ ಕುಮಾರಸ್ವಾಮಿ ಅವರು ಸಹ ಇಂದು ಕಾಂಗ್ರೆಸ್ ಸೇರಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ, ಇಂಧನ ಸಚಿವ ಕೆ ಜೆ ಜಾರ್ಜ್ ಸಮ್ಮುಖದಲ್ಲಿ ಈ ಮೂವರು ತಮ್ಮ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಫ್ರೆಶ್ ನ್ಯೂಸ್

Latest Posts

Featured Videos