ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಶಾಸಕ ಸ್ಥಾನಕ್ಕೆ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಪರ ಮತ ಚಲಾಯಿಸಿದ್ದು ಇಂದು ಬಿಜೆಪಿ ಮೋಕ್ಷ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.
ಈ ಹಿನ್ನಲೆ ಶಾಸಕರ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ ಇದರ ನಡುವೆಯೇ ಇಂದು ಸಂಜೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಯಲ್ಲಾಪುರ ಕ್ಷೇತ್ರದ ಬಿಜೆಪಿಯ ಶಾಸಕ ಶಿವರಾಂ ಹೆಬ್ಬಾರ್ ಅವರು ಕೂಡ ಇಂದು ಸಂಜೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. ಈ ಮೂಲಕ ಬಿಜೆಪಿಗೆ ಇಬ್ಬರು ಶಾಸಕರು ನೀಡಿದ್ದಾರೆ ಬಿಜೆಪಿಗೆ ಇಬ್ಬರು ಶಾಸಕರು ಬಿಗ್ ಶಾಕ್ ನೀಡಿದ್ದಾರೆ.