ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ!

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ!

ವಿಜಯಪುರ, ಜ. 04: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂಬುದಾಗಿ ಘೋಷಣೆ ಮಾಡುವ ಮೂಲಕ, ಮಾಜಿ ಕೇಂದ್ರ ಸಚಿವ ಹಾಗೂ ವಿಜಯಪುರ ಲೋಕಸಭೆಯ ಸದಸ್ಯ ರಮೇಶ್ ಜಿಗಜಿಣಗಿ ಇದೀಗ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭಾ ಸದಸ್ಯ ರಮೇಶ್ ಜಿಗಜಿಣಗಿ, ನನ್ನನ್ನು ಯಾರೂ ಖರೀದಿ ಮಾಡಿಲ್ಲ. ನಾನು ಹೆಗಡೆ, ಜೆ ಹೆಚ್ ಪಟೇಲ್ ಅವರ ಶಿಷ್ಯ. ಅವರಂತೆಯೇ ಗೌರವಯುತವಾಗಿ ರಾಜಕೀಯ ನಿವೃತ್ತಿ ಹೊಂದುತ್ತಿದ್ದೇನೆ ಎಂಬುದಾಗಿ ಘೋಷಣೆ ಮಾಡಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, 45 ವರ್ಷಗಳಿಂದ ನಾನು ಗೌರವಯುತವಾಗಿಯೇ ರಾಜಕೀಯ ಮಾಡಿದ್ದೇನೆ. ಪಕ್ಷದ ರಾಜಕೀಯ ಸಿದ್ಧಾಂತದಂತೆ ಕೆಲಸ ಮಾಡಿದ್ದೇನೆ. ಅದರಂತೆ ನಿವೃತ್ತಿ ಹೊಂದುತ್ತಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎನ್ನುವ ಮೂಲಕ ತಮ್ಮ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos