ಚಪ್ಪಲಿಯಿಂದ ಹೊಡೆದಾಡಿಕೊಂಡ ಬಿಜೆಪಿ ಸಂಸದ, ಶಾಸಕ: ಕ್ರಮಕ್ಕೆ ಮುಂದಾದ ಬಿಜೆಪಿ!

ಚಪ್ಪಲಿಯಿಂದ ಹೊಡೆದಾಡಿಕೊಂಡ ಬಿಜೆಪಿ ಸಂಸದ, ಶಾಸಕ: ಕ್ರಮಕ್ಕೆ ಮುಂದಾದ ಬಿಜೆಪಿ!

ಲಖನೌ, ಮಾ.7, ನ್ಯೂಸ್ ಎಕ್ಸ್ ಪ್ರೆಸ್: ಉತ್ತರಪ್ರದೇಶದ ಬಿಜೆಪಿ ಸಂಸದ ಮತ್ತು ಶಾಸಕರು ಚಪ್ಪಲಿಯಲ್ಲಿ ಬಡಿದಾಡಿಕೊಳ್ಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಿಜೆಪಿ ಮುಖಂಡರ ಈ ಅನಾಗರಿಕ ವರ್ತನೆ ಈಗ ವ್ಯಾಪಕವಾಗಿ ಜನರ ಟೀಕೆಗೆ ಗುರಿಯಾಗಿದೆ.

ಇಂದು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 200 ಕಿ.ಮೀ. ದೂರದಲ್ಲಿರುವ ಕಬಿರ್ ನಗರದಲ್ಲಿ ವಿವಿಧ ಯೋಜನೆ ಸಂಬಂಧ ಸಭೆಯನ್ನು ಆಯೋಜಿಸಿಲಾಗಿತ್ತು. ಈ ವೇಳೆ ಈ ಸಭೆಯ ವರದಿಗೆ ಮಾಧ್ಯಮಗಳನ್ನು ಆಹ್ವಾನಿಸಲಾಗಿತ್ತು. ಕಾಮಗಾರಿಗಳ ಕುರಿತು ನಡೆದ ಸಭೆಯಲ್ಲಿ ಸಂಸದ ಶರದ್ ತ್ರಿಪಾಠಿ, ನಾನು ಈ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಶಂಕುಸ್ಥಾಪನಾ ಸಮಾರಂಭದ ವೇಳೆ ನನ್ನ ಹೆಸರನ್ನು ಕೈ ಬಿಟ್ಟಿದ್ದು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದೇ ವಿಚಾರವಾಗಿ ಬಿಜೆಪಿಯ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಸಂಸದ ಶರದ್ ತ್ರಿಪಾಠಿ ಚಪ್ಪಲಿ ತೆಗೆದುಕೊಂಡು ಶಾಸಕ ಬಘೇಲ್ ಗೆ ಹೊಡೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಬಘೇಲ್ ಅವರು ತ್ರಿಪಾಠಿ ಕುಳಿತ್ತಿದ್ದ ಸ್ಥಳಕ್ಕೆ ತೆರಳಿ ಹೊಡೆದಿದ್ದಾರೆ.

ಸಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಎಂ.ಎನ್.ಪಾಂಡೆ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಘಟನೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಇಬ್ಬರನ್ನು ಲಕ್ನೋ ಬರುವಂತೆ ಸಮನ್ಸ್ ಜಾರಿ ಮಾಡಲಾಗಿದ್ದು, ಇಬ್ಬರ ಮೇಲೂ ಶಿಸ್ತು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos