2 ಹಂತದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್

2 ಹಂತದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್

ಬೆಂಗಳೂರು, ಮಾ.9, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, ಮೊದಲು ಹಾಲಿಗಳಿಗೆ ಟಿಕೆಟ್​ ಕೊಟ್ಟು, ನಂತರ ಉಳಿದ‌ ಕ್ಷೇತ್ರಗಳಿಗೆ ಅಭ್ಯರ್ಥಿಗಳ‌ ಹೆಸರು ಪ್ರಕಟಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ಅವರು ಇಂದು ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಾಗಾರಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹಾಗೂ ರಾಜ್ಯ ಕಾರ್ಯದರ್ಶಿ ತೇಜಸ್ವಿನಿ ಗೌಡ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.

ಇದೇ ವೇಳೆ ಅವರು ಮಾತನಾಡುತ್ತ ಇನ್ನು ಒಂದೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಎರಡು ಹಂತಗಳಲ್ಲಿ ಬಿಡುಗಡೆಯಾಗುವ ಸಂಭವವಿದೆ. ಮೊದಲ ಹಂತದಲ್ಲಿಯೇ ಎಲ್ಲ ಹಾಲಿ ಸಂಸದರಿಗೆ ಟಿಕೆಟ್ ಘೋಷಣೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಕಾಂಗ್ರೆಸ್​ನ ಹಾಲಿ ಸಂಸದರು ಇರುವ ಕ್ಷೇತ್ರಗಳಲ್ಲಿ ಪ್ರಭಾವಿ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಬೇಕೆಂದು ಸಹ ರಾಷ್ಟ್ರೀಯ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ ಅಂತ ಹೇಳಿದರು.

ಇನ್ನು ದೇವೇಗೌಡರ ಕುಟುಂಬದವರೇ ಸುಳ್ಳುಗಾರರು. ಇವರಿಂದ ನಮಗೆ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರವಿಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.

ಫ್ರೆಶ್ ನ್ಯೂಸ್

Latest Posts

Featured Videos