ಕೊಪ್ಪಳ, ಮಾ.14, ನ್ಯೂಸ್ ಎಕ್ಸ್ ಪ್ರೆಸ್: ಪ್ರಧಾನಿ ಮೋದಿ ಅವರು 5 ವರ್ಷ ಬರೀ ಸುಳ್ಳು ಹೇಳಿಕೊಂಡು ಬಂದಿದ್ದಾರೆ. ಕೆಲಸ ಮಾಡಿ ಚುನಾವಣೆಗೆ ಅವರು ಹೋಗದೇ ಯೋಧರ ಮೂಲಕ ಚುನಾವಣೆಗೆ ಹೋಗುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವ್ಯಂಗ್ಯವಾಡಿದ್ದಾರೆ.
ಇಂದು ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಮಾತಾಕೀ ಜೈ ಎಂಬ ಸ್ಲೋಗನ್ ಬಿಜೆಪಿಯವರು ಗುತ್ತಿಗೆ ಪಡೆದವರ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಭಾರತ್ ಮಾತಾಕೀ ಜೈ ಎಂಬುದು ಯಾವುದೇ ಪಕ್ಷಕ್ಕೆ ಸೀಮಿತವಲ್ಲ. ನಾವೂ ಭಾರತ್ ಮಾತಾಕೀ ಜೈ ಎನ್ನುತ್ತೇವೆ ಎಂದರು.
ಇನ್ನು ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಲ್ಲಿ 8 ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಮಾರ್ಚ್ 16 ರಂದು ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗುತ್ತದೆ. ಈ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.