ಮೌಢ್ಯ ಹರಡುವುದನ್ನು ಬಿಜೆಪಿ ವಿರೋಧಿಸುತ್ತದೆ: ಸಚಿವ ಅಶೋಕ್

ಮೌಢ್ಯ ಹರಡುವುದನ್ನು ಬಿಜೆಪಿ ವಿರೋಧಿಸುತ್ತದೆ: ಸಚಿವ ಅಶೋಕ್

ಬೆಂಗಳೂರು, ಜ. 24: ಮೌಢ್ಯ ಹರಡುವುದನ್ನು ಬಿಜೆಪಿ ವಿರೋಧಿಸುತ್ತದೆ. ಹಾಗೆ ನೋಡಿದರೆ ಜ್ಯೋತಿಷ್ಯ ನಂಬುವುದು ಜೆಡಿಎಸ್, ಕಾಂಗ್ರೆಸ್ ನಾಯಕರೇ. ನಾವು ಜ್ಯೋತಿಷ್ಯ ನಿಷೇಧಿಸಿದರೆ ಅವರಿಗೆ ಕಷ್ಟವಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾಯ್ದೆಯಲ್ಲಿ ಧರ್ಮದ ವಿಷಯವನ್ನು ಬೆರೆಸಿದ ಕಾರಣಕ್ಕೆ ನಾವು ವಿರೋಧಿಸಿದ್ದೆವು. ಮೌಢ್ಯ ಹರಡುವುದನ್ನು ಬಿಜೆಪಿ ವಿರೋಧಿಸುತ್ತದೆ. ಹಾಗೆ ನೋಡಿದರೆ ಜ್ಯೋತಿಷ್ಯ ನಂಬುವುದು ಜೆಡಿಎಸ್, ಕಾಂಗ್ರೆಸ್ ನಾಯಕರೇ. ಈಗ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಧ್ಯ ಪ್ರದೇಶದಲ್ಲಿ ಹೋಮ ಮಾಡಿಸುತ್ತಿಲ್ಲವೇ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿಯವರು ಯಾವಾಗಲೂ ಜ್ಯೋತಿಷ್ಯವನ್ನು ನಂಬುತ್ತಾರೆ. ನಾವು ಜ್ಯೋತಿಷ್ಯ ನಿಷೇಧಿಸಿದರೆ ಅವರಿಗೆ ಕಷ್ಟವಾಗುತ್ತದೆ. ಹಾಗಾಗಿ ಜ್ಯೋತಿಷ್ಯ ನಿಷೇಧಿಸುವುದಿಲ್ಲ ಎಂದು ಟಾಂಗ್ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos