‘ಸ್ಟಾರ್ ಪ್ರಚಾರಕ’ರ ಪಟ್ಟಿಯಲ್ಲೂ ಇಲ್ಲ ಬಿಜೆಪಿ ಹಿರಿಯ ನಾಯಕರ ಹೆಸರು

‘ಸ್ಟಾರ್ ಪ್ರಚಾರಕ’ರ ಪಟ್ಟಿಯಲ್ಲೂ ಇಲ್ಲ ಬಿಜೆಪಿ ಹಿರಿಯ ನಾಯಕರ ಹೆಸರು

ನವದೆಹಲಿ, ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಚಾರ ಚುರುಕು ಪಡೆಯುತ್ತಿದೆ. ಬಿಜೆಪಿ ನಾಯಕರು ಬೇರೆ ಬೇರೆ ಪ್ರದೇಶಗಳಲ್ಲಿ ಪ್ರಚಾರ ಶುರು ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾರ್ಚ್ 28 ರಿಂದ ಪ್ರಚಾರ ಕಣಕ್ಕೆ ಧುಮುಕಲಿದ್ದಾರೆ. ಈ ಮಧ್ಯೆ ಉತ್ತರ ಪ್ರದೇಶದ ಬಿಜೆಪಿ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಬಿಜೆಪಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿದೆ ಎಂಬ ಆರೋಪವಿದೆ. ಇದು 2014 ಲೋಕಸಭೆ ಚುನಾವಣೆಯಲ್ಲಿಯೇ ಕೇಳಿ ಬಂದಿತ್ತು. ಈಗ ಇದು ಇನ್ನಷ್ಟು ಚರ್ಚೆಗೆ ಕಾರಣವಾಗ್ತಿದೆ. ಅದಕ್ಕೆ ಕಾರಣ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲೂ ಹಿರಿಯ ನಾಯಕ ಅಡ್ವಾಣಿ, ಮುರಳಿ ಮನೋಹರ ಜೋಶಿ ಹೆಸರು ಇಲ್ಲದೆ ಇರುವುದು.

ಅಡ್ವಾಣಿ ಈ ಬಾರಿ ಚುನಾವಣಾ ಕಣಕ್ಕಿಳಿಯುತ್ತಿಲ್ಲ. ಮುರಳಿ ಮನೋಹರ್ ಜೋಶಿಗೂ ಚುನಾವಣೆಗೆ ಸ್ಪರ್ಧಿಸದಂತೆ ಸೂಚನೆ ನೀಡಲಾಗಿದೆಯಂತೆ. ಈಗ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲೂ ಇವ್ರ ಹೆಸರಿಲ್ಲ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಆದಿತ್ಯನಾಥ್, ಉಮಾ ಭಾರತಿ, ಹೇಮಾ ಮಾಲಿನಿ, ಶಿವರಾಜ್ ಸಿಂಗ್ ಚೌಹಾಣ್, ಪಿಯೂಷ್ ಗೋಯಲ್, ಮನೋಜ್ ತಿವಾರಿ, ದಿನೇಶ್ ಶರ್ಮಾ ಮತ್ತು ಕೇಶವ ಪ್ರಸಾದ್ ಮೌರ್ಯ ಸೇರಿದಂತೆ ಅನೇಕರ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos